AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ

KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ

ಗಂಗಾಧರ​ ಬ. ಸಾಬೋಜಿ
|

Updated on:May 24, 2025 | 12:18 PM

ಇಂಜಿನಿಯರಿಂಗ್​ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್​ಗಳ ಪ್ರವೇಶಕ್ಕಾಗಿ ನಡೆದಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದೆ. ಯುಜಿಸಿಇಟಿ-2025 ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ಸಾಕಷ್ಟು ಕಾತುರದಿಂದ ಕಾದಿದ್ದರು. ಇದೀಗ ಆ ಕಾಯುವಿಕೆ ಅಂತ್ಯವಾಗಿದೆ. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್​ ಫಲಿತಾಂಶ ಪ್ರಕಟಿಸಿದ್ದಾರೆ. ಲೈವ್​ ನೋಡಿ.

ಬೆಂಗಳೂರು, ಮೇ 24: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಂದು ಕೆಸಿಇಟಿ ಫಲಿತಾಂಶವನ್ನು ಪ್ರಕಟಿಸಿದೆ. ಮಧ್ಯಾಹ್ನ 2 ಗಂಟೆಗೆ ಕೆಇಎ ಅಧಿಕೃತ ವೆಬ್‌ಸೈಟ್​ಗಳಾದ cetonline.karnataka.gov.in ಮತ್ತು karresults.nic.inನಲ್ಲಿ ಫಲಿತಾಂಶ ಲಭ್ಯವಿರಲಿದೆ. ಏಪ್ರಿಲ್ 16, 17ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆದಿತ್ತು. ಕೆಸಿಇಟಿ ಫಲಿತಾಂಶದ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್​ ಸುದ್ದಿಗೋಷ್ಠಿ ನಡೆಸಿದ್ದಾರೆ. ಅದರ ಲೈವ್​ ಇಲ್ಲಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: May 24, 2025 12:18 PM