CET ಪರೀಕ್ಷೆ: ಆಭರಣ ಧರಿಸಿ ಬಂದಿದ್ದ ವಿದ್ಯಾರ್ಥಿಗಳಿಗೆ ಶಾಕ್​​ ಕೊಟ್ಟ ಸಿಬ್ಬಂದಿ

Edited By:

Updated on: Apr 23, 2026 | 11:49 AM

ಕರ್ನಾಟಕ ರಾಜ್ಯಾದ್ಯಂತ, ರಾಜಧಾನಿ ಬೆಂಗಳೂರು ಸೇರಿದಂತೆ, ಸಿಇಟಿ ಪರೀಕ್ಷೆ ಆರಂಭಗೊಂಡಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನೇತೃತ್ವದಲ್ಲಿ ಎರಡು ದಿನಗಳ ಕಾಲ ನಡೆಯುವ ಈ ಪರೀಕ್ಷೆಗೆ ವ್ಯಾಪಕ ಭದ್ರತೆ ಒದಗಿಸಲಾಗಿದೆ. ಅಭ್ಯರ್ಥಿಗಳು ಯಾವುದೇ ಆಭರಣಗಳನ್ನು ಧರಿಸಿ ಪರೀಕ್ಷಾ ಕೊಠಡಿಗೆ ಪ್ರವೇಶಿಸದಂತೆ ಸೂಚನೆ ನಡುವೆಯೂ ಕಿವಿಯೋಲೆ, ಬಳೆ, ಚೈನ್ ಧರಿಸಿ ಬಂದಿದ್ದ ವಿದ್ಯಾರ್ಥಿಗಳಿಂದ ಅವನ್ನು ತೆಗೆಸಿ ಪರೀಕ್ಷೆ ಬರೆಯಲು ಅನುವು ಮಾಡಿಕೊಟ್ಟ ಪ್ರಸಂಗ ಕೆಲವೆಡೆ ನಡೆದಿದೆ.

ಬೆಂಗಳೂರು, ಏಪ್ರಿಲ್​​ 23: ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದಾದ್ಯಂತ ಸಿಇಟಿ ಪರೀಕ್ಷೆಯು ಇಂದಿನಿಂದ ಆರಂಭವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ವತಿಯಿಂದ ಈ ಪ್ರಮುಖ ಪರೀಕ್ಷೆಯನ್ನು ಎರಡು ದಿನಗಳ ಕಾಲ ನಡೆಸಲಾಗುತ್ತಿದೆ. ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದ್ದು, ಅಭ್ಯರ್ಥಿಗಳು ಯಾವುದೇ ಆಭರಣಗಳನ್ನು ಧರಿಸಿ ಪರೀಕ್ಷಾ ಕೊಠಡಿಗೆ ಪ್ರವೇಶಿಸದಂತೆ ಸೂಚನೆ ನೀಡಲಾಗಿದೆ. ಮೊಬೈಲ್ ಫೋನ್‌ಗಳು, ಸ್ಮಾರ್ಟ್ ವಾಚ್‌ಗಳು ಅಥವಾ ಇತರ ಯಾವುದೇ ಎಲೆಕ್ಟ್ರಾನಿಕ್ ಸಾಧನಗಳಿಗೂ ಕೂಡ ಪರೀಕ್ಷಾ ಕೇಂದ್ರದೊಳಗೆ ಅನುಮತಿ ಇರುವುದಿಲ್ಲ. ಈ ನಡುವೆಯೂ ಕಿವಿಯೋಲೆ, ಬಳೆ, ಚೈನ್ ಧರಿಸಿ ಬಂದಿದ್ದ ವಿದ್ಯಾರ್ಥಿಗಳಿಂದ ಅವನ್ನು ತೆಗೆಸಿ ಪರೀಕ್ಷೆ ಬರೆಯಲು ಅನುವು ಮಾಡಿಕೊಟ್ಟ ಪ್ರಸಂಗ ಕೆಲವೆಡೆ ನಡೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More