Live: ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಅನ್ಬುಕುಮಾರ್ ಸುದ್ದಿಗೋಷ್ಠಿ

Updated on: Jul 08, 2026 | 3:22 PM

CEO Anbu Kumar Press Conference: ಭಾರತ ಚುನಾವಣಾ ಆಯೋಗದ ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿಯಾಗಿ ಅನ್ಬುಕುಮಾರ್ ಅವರು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ್ದಾರೆ. ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಸೇರಿ ಹಲವು ಮಹತ್ವದ ವಿಷಯಗಳನ್ನು ಅವರು ಹಂಚಿಕೊಂಡಿದ್ದು, ಅದರ ಸಂಪೂರ್ಣ ವಿಡಿಯೋ ಇಲ್ಲಿದೆ.

ಬೆಂಗಳೂರು, ಜುಲೈ 08: ಭಾರತ ಚುನಾವಣಾ ಆಯೋಗದ ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಅನ್ಬುಕುಮಾರ್ ಅವರು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ್ದಾರೆ. ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಪ್ರಕ್ರಿಯೆ ಬಗ್ಗೆ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್​​ ಆಕ್ಷೇಪ ತೆಗೆದಿದ್ದು, ಮನೆ ಮನೆಗೆ ತೆರಳಿ ಎಸ್​​ಐಆರ್​​ ನಡೆಸದೆ ಮಸೀದಿ ಮತ್ತು ಸಮುದಾಯಭವನಗಳಲ್ಲಿ ಜನರನ್ನು ಗುಂಪು ಸೇರಿಸಲಾಗುತ್ತಿದೆ ಎಂದು ಆರೋಪಿಸಿ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್​ಗೆ ದೂರು ನೀಡಿತ್ತು. ಈ ಬೆನ್ನಲ್ಲೇ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಅವರ ಈ ಸುದ್ದಿಗೋಷ್ಠಿ ಮಹತ್ವ ಪಡೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jul 08, 2026 03:18 PM
Loading...
Unable to load recommendations.
Follow Us
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More