Video: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ ಸಿದ್ದರಾಮಯ್ಯ ಭರವಸೆ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಇತ್ತೀಚೆಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರ್ನಾಟಕದ ಮೂವರು ಯೋಧರು ಸೇರಿ ಐವರು ಹುತಾತ್ಮರಾಗಿದ್ದಾರೆ. ಬೆಳಗಾವಿಯಲ್ಲಿ ಇಬ್ಬರು ಯೋದರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಿಮ ನಮನ ಸಲ್ಲಿಸಿದರು. ಸರ್ಕಾರದಿಂದ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ಬೆಳಗಾವಿಯ ಮರಾಠಾ ರೆಜಿಮೆಂಟ್ನಲ್ಲಿ ದಯಾನಂದ್ ತಿರಕನ್ನವರ್, ಮಹೇಶ್ ಮಾರಿಗೊಂಡಗೆ ಅಂತಿಮ ನಮನ ಸಲ್ಲಿಸಿ ಕುಟುಂಬದವರಿಗೆ ಸಾಂತ್ವಾನ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಇತ್ತೀಚೆಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರ್ನಾಟಕದ ಮೂವರು ಯೋಧರು ಸೇರಿ ಐವರು ಹುತಾತ್ಮರಾಗಿದ್ದಾರೆ. ಬೆಳಗಾವಿಯಲ್ಲಿ ಇಬ್ಬರು ಯೋದರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಿಮ ನಮನ ಸಲ್ಲಿಸಿದರು. ಸರ್ಕಾರದಿಂದ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.
ಬೆಳಗಾವಿಯ ಮರಾಠಾ ರೆಜಿಮೆಂಟ್ನಲ್ಲಿ ದಯಾನಂದ್ ತಿರಕನ್ನವರ್, ಮಹೇಶ್ ಮಾರಿಗೊಂಡಗೆ ಅಂತಿಮ ನಮನ ಸಲ್ಲಿಸಿ ಕುಟುಂಬದವರಿಗೆ ಸಾಂತ್ವಾನ ಹೇಳಿದ್ದಾರೆ.
ಬೆಳಗಾವಿ ಬಳಿಯ ಸಾಂಬ್ರಾ ಗ್ರಾಮದ ಯೋಧ ಸುಬೇದಾರ್ ದಯಾನಂದ ತಿರಕಣ್ಣವರ (45), ಕುಂದಾಪುರ ಬಳಿಯ ಕೋಟೇಶ್ವರ ಬಿಜಾಡಿಯ ಅನೂಪ್ (33) ಮಹಾಲಿಂಗಪುರದ 25 ವರ್ಷದ ಮಹೇಶ್ ಮರಿಗೊಂಡ ಮೃತ ಯೋಧರು.
ಯೋಧರು ಸೇನಾ ವಾಹನದಲ್ಲಿ ಸಾಗುತ್ತಿದ್ದರು. ವಾಹನವು ಕಿರಿದಾದ ರಸ್ತೆಯಿಂದ ಜಾರಿ ಅಂದಾಜು 150 ಅಡಿ ಆಳದ ಕಂದಕಕ್ಕೆ ಉರುಳಿತು. ವಾಹನವು ರಸ್ತೆಯಿಂದ ಜಾರಿದ್ದು ಹೇಗೆ ಎಂಬುದರ ಕುರಿತು ತನಿಖೆ ನಡೆಯುತ್ತಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ