ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಮುಹೂರ್ತ ಫಿಕ್ಸ್: ಇಲ್ಲಿದೆ ದಿನಾಂಕ, ಸಮಯದ ವಿವರ

Updated on: May 29, 2026 | 2:59 PM

ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಭಾನುವಾರ ಸಂಜೆ ನಡೆಯುವುದು ಖಚಿತವಾಗಿದೆ. ಈ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆಯಲಿದೆ. ಹೈಕಮಾಂಡ್ ನಾಯಕರಿಂದ ಮುಂದಿನ ಮುಖ್ಯಮಂತ್ರಿಯ ಘೋಷಣೆ ಆಗಲಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಉಪಸ್ಥಿತರಿರಲಿದ್ದಾರೆ.

ಬೆಂಗಳೂರು, ಮೇ 29: ಬೆಂಗಳೂರಿನಲ್ಲಿ ಭಾನುವಾರ ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆ ನಡೆಯಲಿದೆ. ಈ ಬಗ್ಗೆ ಇದ್ದ ಗೊಂದಲಗಳಿಗೆ ತೆರೆ ಬಿದ್ದಿದ್ದು, ಕೆಪಿಸಿಸಿ ಕಚೇರಿಯಿಂದ ಎಲ್ಲಾ ಶಾಸಕರಿಗೂ ಬೆಂಗಳೂರಿನಲ್ಲೇ ಇರುವಂತೆ ಸೂಚನೆ ನೀಡಲಾಗಿದೆ. ಈ ಬಗ್ಗೆ ಡಿಕೆ ಶಿವಕುಮಾರ್ ಸಹ ಹೇಳಿಕೆ ನೀಡಿದ್ದು, ಭಾನವಾರ ಸಂಜೆ ವಿಧಾನಸೌಧದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂದಿದ್ದಾರೆ. ಸಿಎಲ್‌ಪಿ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗುತ್ತದೆ. ಈ ವೇಳೆ ಹೈಕಮಾಂಡ್ ನಾಯಕರಿಂದ ಮುಂದಿನ ಮುಖ್ಯಮಂತ್ರಿಯನ್ನು ಘೋಷಿಸಲಾಗುತ್ತದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಹಿಂದೆ ಸಿದ್ದರಾಮಯ್ಯನವರ ಆಯ್ಕೆ ಪ್ರಕ್ರಿಯೆಯಲ್ಲಿ ನಡೆದಂತೆ ಚುನಾವಣೆ ನಡೆಯದೆ, ಹೈಕಮಾಂಡ್‌ನ ನೇರ ನಿರ್ಧಾರವನ್ನು ಸಭೆಯಲ್ಲಿ ಪ್ರಕಟಿಸಲಾಗುವುದು ಎಂದು ನಿರೀಕ್ಷಿಸಲಾಗಿದೆ. ಸಿಎಲ್‌ಪಿ ನಾಯಕನ ಆಯ್ಕೆಯಾದ ಬಳಿಕ ಮುಂದಿನ ಮುಖ್ಯಮಂತ್ರಿಯ ಪ್ರಮಾಣ ವಚನ ಸಮಾರಂಭದ ದಿನಾಂಕವನ್ನೂ ನಿಗದಿಪಡಿಸುವ ಸಾಧ್ಯತೆ ಇದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: May 29, 2026 11:22 AM
Follow Us
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More