ಸಿಎಂ ಪಟ್ಟಕ್ಕಾಗಿ ದೆಹಲಿಯಲ್ಲಿ ಹೈವೋಲ್ಟೇಜ್ ಸಭೆ: ಬೆಂಗಳೂರಿನಲ್ಲಿ ಜಮೀರ್ ಸಿಎಂ ಆಗಲಿ ಎಂದ ಸ್ವಾಮೀಜಿಯ ವಿಡಿಯೋ ವೈರಲ್!

Updated on: May 26, 2026 | 11:58 AM

ಸಿಎಂ ಗಾದಿಯ ಪೈಪೋಟಿ ಸಂಬಂಧ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಭೆ ಬೆನ್ನಲ್ಲೇ, ಸಚಿವ ಜಮೀರ್ ಅಹ್ಮದ್ ಖಾನ್ ಕರ್ನಾಟಕದ ಮುಖ್ಯಮಂತ್ರಿಯಾಗಬೇಕೆಂದು ಮಹೇಶ್ವರಾನಂದ ಸ್ವಾಮೀಜಿ ಈ ಹಿಂದೆ ಒತ್ತಾಯಿಸಿದ್ದ ಹಳೇ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ಕುರ್ಚಿ ಬಿಕ್ಕಟ್ಟು ತಾರಕಕ್ಕೇರಿರುವ ಸಂದರ್ಭದಲ್ಲೇ ವೈರಲ್ ಆಗುತ್ತಿರುವ ವಿಡಿಯೋ ಇಲ್ಲಿದೆ ನೋಡಿ.

ಬೆಂಗಳೂರು, ಮೇ 26: ಕರ್ನಾಟಕ ಕಾಂಗ್ರೆಸ್​​ನಲ್ಲಿ ಮತ್ತೆ ಕುರ್ಚಿ ಕದನ ತಾರಕಕ್ಕೇರುತ್ತಿದೆ. ಸಿಎಂ ಸಿದ್ದರಾಮಯ್ಯ ಹಲವು ಮಂದಿ ಸಚಿವರೊಂದಿಗೆ ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಮಾಡಿದ್ದರೆ, ಡಿಸಿಎಂ ಡಿಕೆ ಶಿವಕುಮಾರ್ ಸಹ ಉನ್ನತ ಮಟ್ಟದ ನಾಯಕರ ಜತೆ ಚರ್ಚೆ ಮಾಡುತ್ತಿದ್ದಾರೆ. ಹೈಕಮಾಂಡ್ ನಾಯಕರಿಂದ ಹೈವೋಲ್ಟೇಜ್ ಸಭೆ ನಡೆಯುತ್ತಿದೆ. ಅತ್ತ ರಾಷ್ಟ್ರ ರಾಜಧಾನಿಯಲ್ಲಿ ರಾಜ್ಯದ ಪಟ್ಟದ ಪಗಡೆಯಾಟ ಜೋರಾಗಿದ್ದರೆ ಇತ್ತ ಬೆಂಗಳೂರಿನಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಸಿಎಂ ಆಗಲಿ ಎಂಬ ಕೂಗು ಕೇಳಿಬಂದಿದೆ. ಎರಡು ವಾರಗಳ ಹಿಂದೆ ಬೆಂಗಳೂರಿನಲ್ಲಿ ಮುಸ್ಲಿಂ ನಾಯಕರ ಸಭೆಯ ವೇಳೆ ಮಹೇಶ್ವರಾನಂದ ಸ್ವಾಮೀಜಿ ಸಚಿವ ಜಮೀರ್ ಅಹ್ಮದ್ ಅವರನ್ನು ಭೇಟಿಯಾಗಿದ್ದರು. ಇದೇ ವೇಳೆ, ಬಹಿರಂಗವಾಗಿ ಜಮೀರ್ ಅವರನ್ನು ಬೆಂಬಲಿಸಿದ್ದರು. ಜಮೀರ್ ಅಹ್ಮದ್ ಖಾನ್ ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಬೇಕು ಎಂದು ಸ್ವಾಮೀಜಿ ಹೇಳಿದ್ದರು. ಇದೀಗ ಆ ವಿಡಿಯೋ ಮತ್ತೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us