AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಪಾನ್‌ನಿಂದಲೇ ಆಶಾ ಕಾರ್ಯಕರ್ತೆಯರಿಗೆ ವಿಡಿಯೋ ಕಾಲ್ ಮಾಡಿದ ಸಿಎಂ!

ಜಪಾನ್‌ನಿಂದಲೇ ಆಶಾ ಕಾರ್ಯಕರ್ತೆಯರಿಗೆ ವಿಡಿಯೋ ಕಾಲ್ ಮಾಡಿದ ಸಿಎಂ!

ಕಿರಣ್​ ಸೂರ್ಯ
| Edited By: |

Updated on: Nov 24, 2026 | 2:47 PM

Share

ಜಪಾನ್‌ನಿಂದಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಶಾ ಕಾರ್ಯಕರ್ತೆಯರಿಗೆ ವಿಡಿಯೋ ಕರೆ ಮಾಡಿ ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿದ್ದಾರೆ. ಗೌರವಧನ ಹೆಚ್ಚಳದ ಬಗ್ಗೆ ಸರ್ಕಾರ ಗಮನ ಹರಿಸಿದೆ, ಹಣಕಾಸು ಇಲಾಖೆಯೊಂದಿಗೆ ಚರ್ಚಿಸಲಾಗಿದೆ ಮತ್ತು ನ್ಯಾಯ ದೊರಕಿಸಿಕೊಡುವ ಭರವಸೆ ನೀಡಿದ್ದಾರೆ. ಸಭೆ ನಡೆಸಿ ಸಮಸ್ಯೆ ಬಗೆಹರಿಸುವುದಾಗಿ ಸಿಎಂ ಆಶ್ವಾಸನೆ ನೀಡಿದ್ದಾರೆ.

ಬೆಂಗಳೂರು, ನವೆಂಬರ್ 24: ಗೌರವಧನ ಹೆಚ್ಚಳಕ್ಕಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಮನವೊಲಿಕೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜಪಾನ್‌ನಿಂದಲೇ ವಿಡಿಯೋ ಕಾಲ್ ಮಾಡಿದ್ದಾರೆ. ಒಂದು ಕಾರ್ಯಕ್ರಮ ಮುಗಿಸಿ ಟೋಕಿಯೋಗೆ ಹೊರಟಿದ್ದ ಸಿಎಂ, ಪೊಲೀಸ್ ಅಧಿಕಾರಿಯ ಮೂಲಕ ಆಶಾ ಕಾರ್ಯಕರ್ತೆಯರೊಂದಿಗೆ ಮಾತನಾಡಿದ್ದಾರೆ.

ತಮ್ಮ ಮೇಲೆ ಕೋಪ ಮಾಡಿಕೊಳ್ಳದಂತೆ ಮನವಿ ಮಾಡಿದ ಸಿಎಂ, ಪ್ರತಿಭಟನೆ ಹಿಂಪಡೆಯುವಂತೆ ಆಶಾ ಕಾರ್ಯಕರ್ತೆಯರಲ್ಲಿ ಮನವಿ ಮಾಡಿದರು. “ನಾನು ಹೇಳಿದ ನಂತರವೂ ನನ್ನ ಮಾತು ಕೇಳದೆ ಪ್ರತಿಭಟನೆ ಮುಂದುವರಿಸುತ್ತಿದ್ದೀರಲ್ಲ, ಹೆಣ್ಣುಮಕ್ಕಳಿಗೆಲ್ಲ ತೊಂದರೆಯಾಗುತ್ತಿದೆ” ಎಂದು ಸಿಎಂ ಆಶಾ ಕಾರ್ಯಕರ್ತೆಯರನ್ನು ಉದ್ದೇಶಿಸಿ ಹೇಳಿದರು. ಆಶಾ ಕಾರ್ಯಕರ್ತೆಯರ ಬಗ್ಗೆ ತನಗೆ ವಿಶೇಷ ಕಾಳಜಿ ಇದೆ ಎಂದು ಸಿಎಂ ಪುನರುಚ್ಚರಿಸಿದರು.

ಆಂಗನವಾಡಿ ಕಾರ್ಯಕರ್ತೆಯರು ಕೂಡ ದೆಹಲಿಗೆ ತೆರಳಿ ಹೋರಾಟ ನಡೆಸಲು ಸಿದ್ಧವಾಗುತ್ತಿರುವ ವಿಷಯವನ್ನು ಪ್ರಸ್ತಾಪಿಸಿದ ಸಿಎಂ, ಹಣಕಾಸು ಇಲಾಖೆಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿರುವುದಾಗಿ ತಿಳಿಸಿದರು. ದಿನೇಶ್ ಅಂತೆನೋ ಎಂಬುವವರು ವಿಷಯ ತಿಳಿಸಿರುವುದನ್ನು ನೆನಪಿಸಿಕೊಂಡ ಸಿಎಂ, ವಿಧಾನಸಭೆ ಅಧಿವೇಶನದ ಹೊತ್ತಿಗೆ ಎಲ್ಲ ವಿಷಯಗಳನ್ನು ಬಗೆಹರಿಸುವ ಭರವಸೆ ನೀಡಿದರು. ತಮ್ಮ ರಾಜಕೀಯ ಸಲಹೆಗಾರ ಜಿ.ಸಿ. ಚಂದ್ರಶೇಖರ್ ಅವರು ಆಶಾ ಕಾರ್ಯಕರ್ತೆಯರನ್ನು ಕರೆದು ಮಾತನಾಡಲು ಸಿದ್ಧರಿದ್ದಾರೆ ಎಂದು ಸಿಎಂ ತಿಳಿಸಿದರು. “ನೀವು ಪ್ರತಿಭಟನೆ ಹಿಂಪಡೆಯಿರಿ, ನಾನು ಕರೆಸಿ ಏನಾದರೂ ಒಂದು ಇತ್ಯರ್ಥ ಮಾಡುತ್ತೇನೆ. ನಿಮಗೆ ನ್ಯಾಯ ಸಿಕ್ಕುವಂತೆ ಮಾಡುತ್ತೇನೆ, ನೀವು ಶ್ರಮ ಪಡುತ್ತಿದ್ದೀರಿ, ನಿಮ್ಮ ಬಗ್ಗೆ ನನಗೆ ಕಾಳಜಿ ಇದೆ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಆಶಾ ಕಾರ್ಯಕರ್ತೆಯರಿಗೆ ಭರವಸೆ ನೀಡಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಿರಣ್​ ಸೂರ್ಯ
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More