ದೆಹಲಿಯಲ್ಲಿ ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಮುಖ್ಯಮಂತ್ರಿಯಾದ ಬಳಿಕ ದೆಹಲಿಗೆ ಭೇಟಿ ನೀಡಿದ ಡಿಕೆ ಶಿವಕುಮಾರ್ ಅವರು, ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಉಪರಾಷ್ಟ್ರಪತಿ ರಾಧಾಕೃಷ್ಣನ್ ಅವರನ್ನು ಭೇಟಿಯಾಗಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಈ ಭೇಟಿಯಲ್ಲಿ ಡಿಕೆ ಶಿವಕುಮಾರ್ ಕೃತಜ್ಞತೆ ಸಲ್ಲಿಸಿ, ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದ್ದಾರೆ.
ನವದೆಹಲಿ, ಜೂನ್ 12: ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ದೆಹಲಿಯಲ್ಲಿ ಭೇಟಿಯಾಗಿದ್ದಾರೆ. ಉಪರಾಷ್ಟ್ರಪತಿ ರಾಧಾಕೃಷ್ಣನ್ ಅವರನ್ನು ಕೂಡ ಭೇಟಿಯಾಗಿ ಶಿವಕುಮಾರ್ ಅವರು ಚರ್ಚೆ ನಡೆಸಿದ್ದಾರೆ. ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ದೆಹಲಿಗೆ ತೆರಳಿರುವ ಡಿಕೆಶಿ, ದೇಶದ ಗಣ್ಯಾತಿಗಣ್ಯ ನಾಯಕರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸುತ್ತಿದ್ದಾರೆ. ಇದಕ್ಕೂ ಮೊದಲು ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನೂ ಸಿಎಂ ಭೇಟಿಯಾಗಿದ್ದರು.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jun 12, 2026 01:02 PM
Follow Us
