AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ನಿವಾಸಕ್ಕೆ ಡಿಕೆ ಶಿವಕುಮಾರ್ ಭೇಟಿ, ರಾಜಕೀಯ ವಿದ್ಯಮಾನಗಳ ಸಮಾಲೋಚನೆ

Video: ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ನಿವಾಸಕ್ಕೆ ಡಿಕೆ ಶಿವಕುಮಾರ್ ಭೇಟಿ, ರಾಜಕೀಯ ವಿದ್ಯಮಾನಗಳ ಸಮಾಲೋಚನೆ

ನಯನಾ ರಾಜೀವ್
|

Updated on: Jun 21, 2026 | 9:52 AM

Share

ಮಹಾರಾಷ್ಟ್ರ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಂಬೈನಲ್ಲಿ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾದರು. ಮಾತೋಶ್ರೀ ನಿವಾಸದಲ್ಲಿ ನಡೆದ ಈ ಭೇಟಿಯಲ್ಲಿ ಉದ್ಧವ್ ಠಾಕ್ರೆ ಕುಟುಂಬ ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಬರಮಾಡಿಕೊಂಡಿತು. ಈ ಸಂದರ್ಭದಲ್ಲಿ ಪ್ರಮುಖ ರಾಜಕೀಯ ವಿದ್ಯಮಾನಗಳ ಕುರಿತು ಸಮಾಲೋಚನೆ ನಡೆಸಲಾಯಿತು.

ಮುಂಬೈ, ಜೂನ್ 21:ಮಹಾರಾಷ್ಟ್ರ ಪ್ರವಾಸದಲ್ಲಿರುವ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಂಬೈನಲ್ಲಿ ಶಿವಸೇನೆ ಮುಖ್ಯಸ್ಥ ಹಾಗೂ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾದರು. ನಿನ್ನೆ ರಾತ್ರಿ ಮುಂಬೈನಲ್ಲಿರುವ ಉದ್ಧವ್ ಠಾಕ್ರೆ ಅವರ ನಿವಾಸ ಮಾತೋಶ್ರೀಯಲ್ಲಿ ಈ ಮಹತ್ವದ ಭೇಟಿ ನಡೆಯಿತು.

ಡಿ.ಕೆ. ಶಿವಕುಮಾರ್ ಆಗಮಿಸುತ್ತಿದ್ದಂತೆ ಉದ್ಧವ್ ಠಾಕ್ರೆ ಅವರ ಕುಟುಂಬದ ಸದಸ್ಯರು ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಉಭಯ ನಾಯಕರು ಪ್ರಸ್ತುತ ರಾಜಕೀಯ ವಿದ್ಯಮಾನಗಳು ಮತ್ತು ಬೆಳವಣಿಗೆಗಳ ಕುರಿತು ಗಹನವಾದ ಸಮಾಲೋಚನೆ ನಡೆಸಿದರು ಎಂದು ತಿಳಿದುಬಂದಿದೆ.

ಕರ್ನಾಟಕ ಮತ್ತು ಮಹಾರಾಷ್ಟ್ರ ಎರಡೂ ರಾಜ್ಯಗಳಲ್ಲಿನ ರಾಜಕೀಯ ಸ್ಥಿತ್ಯಂತರಗಳು ಹಾಗೂ ಪ್ರಾದೇಶಿಕ ಪಕ್ಷಗಳ ಪಾತ್ರದ ಹಿನ್ನೆಲೆಯಲ್ಲಿ ಈ ಭೇಟಿಯು ಹೆಚ್ಚಿನ ಪ್ರಾಮುಖ್ಯತೆ ಪಡೆದುಕೊಂಡಿದೆ. ಡಿ.ಕೆ. ಶಿವಕುಮಾರ್ ಅವರ ಈ ಭೇಟಿಯು ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದ್ದು, ಮುಂದಿನ ದಿನಗಳಲ್ಲಿ ಇದರ ಪರಿಣಾಮಗಳ ಬಗ್ಗೆ ಚರ್ಚೆಗಳು ಶುರುವಾಗಿವೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More