ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ದಾಳಿ ರಾಜಕೀಯ ಪ್ರೇರಿತ ಎಂದ ಸಿಎಂ ಡಿಕೆ ಶಿವಕುಮಾರ್​​

Edited By:

Updated on: Sep 09, 2026 | 12:17 PM

ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲಿನ ಇಡಿ ದಾಳಿ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಇದು ರಾಜಕೀಯ ಪ್ರೇರಿತವಾಗಿದ್ದು, ಆತಂಕಪಡುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಸತೀಶ್ ಜಾರಕಿಹೊಳಿ ಅವರು ಕಾನೂನು ಚೌಕಟ್ಟಿನಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಿದ್ದು, ತನಿಖೆಗೆ ಉತ್ತರ ನೀಡಲಿದ್ದಾರೆ. ಬಿಜೆಪಿ ರಾಜಕೀಯ ಲಾಭಕ್ಕಾಗಿ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಸಿಎಂ ಆರೋಪಿಸಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್​​ 08: ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಮತ್ತು ಕಚೇರಿ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿರುವ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಇಡಿ ದಾಳಿ ನಮಗೆ ಗೊತ್ತಿಲ್ಲದೆ ಇರೋ ವಿಚಾರವೇನಲ್ಲ. ಈ ಹಿಂದೆ ಕೂಡ ಜಾರಕಿಹೊಳಿಯವರ ನಿವಾಸಗಳ ಮೇಲೆ ಇಡಿ ದಾಳಿ ನಡೆದಿದೆ. ಸತೀಶ್ ಜಾರಕಿಹೊಳಿ ಅವರು ವ್ಯಾಪಾರ ವಹಿವಾಟು ನಡೆಸುತ್ತಿದ್ದು, ಯಾವುದೇ ತನಿಖೆ ನಡೆಸಿದರೂ ಅವರು ಉತ್ತರ ನೀಡುತ್ತಾರೆ. ಯಾರು ಏನು ಗಾಬರಿ ಪಡಬೇಕಾಗಿಲ್ಲ ಎಂದು ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ರಾಜಕೀಯ ಲಾಭಕ್ಕಾಗಿ ಕೇಂದ್ರ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ದೂರಿದ ಅವರು, ಇಡಿ ದಾಳಿಗಳು ಕೇವಲ ರಾಜಕೀಯ ಪ್ರೇರಿತ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಈರಣ್ಣಾ ಬಸವಾ

ಈರಣ್ಣಾ ಬಸವಾ.. ಮೂಲತಃ ವಾಣಿಜ್ಯ ನಗರಿ ಹುಬ್ಬಳ್ಳಿಯವರು. ಈರಣ್ಣಾ ಬಿ.ಕಾಮ್ ಪದವೀಧರರಾಗಿದ್ದಾರೆ. ಕಂಟೆಂಟ್ ರೈಟರ್ ಆಗಿ ವೃತ್ತಿಜೀವನ ಆರಂಭಿಸಿದ ನಂತರ ಕನ್ನಡದ ಬೇರೆ ಬೇರೆ ಸುದ್ದಿ ಮಾದ್ಯಮದಲ್ಲಿ ಸುಮಾರು ೬ ವರ್ಷ ಕಾಲ ಡೆಸ್ಕ್ ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸದ್ಯ ಸತತ ಪರಿಶ್ರಮದಿಂದ ಟಿವಿ9 ಕನ್ನಡದಲ್ಲಿ ರಾಜಕೀಯ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಹಲವು ಎಕ್ಸ್ ಕ್ಲೂಸಿವ್ ಸುದ್ದಿಗಳನ್ನು ಹೆಕ್ಕಿ ತೆಗೆದಿದ್ದಾರೆ. ಸಿಎಂ, ಡಿಸಿಎಂ ಬೀಟ್ ಜವಾಬ್ದಾರಿ ಇವರ ಮೇಲಿದ್ದು ಜನರಿಗೆ ಸಿಗಬೇಕಾದ ಅಮೂಲ್ಯ ಸುದ್ದಿಗಳನ್ನು ತಲುಪಿಸುವ ಕಾಯಕವನ್ನು ಜವಾಬ್ದಾರಿಯಿಂದ ಮಾಡುತ್ತಿದ್ದಾರೆ. ಬರವಣಿಗೆ, ಕತೆ, ಕವನ ಇವರ ಆಸಕ್ತಿಯ ಕ್ಷೇತ್ರ.

Read More