AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ವರ್ಷದಿಂದ ಸರ್ಕಾರದ ವತಿಯಿಂದ ‘ಇಂಜಿನಿಯರ್ಸ್​ ಡೇ’ ಆಚರಣೆ: ಸಿಎಂ ಡಿಕೆ ಶಿವಕುಮಾರ್ ಘೋಷಣೆ

ಮುಂದಿನ ವರ್ಷದಿಂದ ಸರ್ಕಾರದ ವತಿಯಿಂದ ‘ಇಂಜಿನಿಯರ್ಸ್​ ಡೇ’ ಆಚರಣೆ: ಸಿಎಂ ಡಿಕೆ ಶಿವಕುಮಾರ್ ಘೋಷಣೆ

ಈರಣ್ಣಾ ಬಸವಾ
| Edited By: |

Updated on: Sep 15, 2026 | 1:25 PM

Share

ಮುಂದಿನ ವರ್ಷದಿಂದ ಸರ್ಕಾರದ ವತಿಯಿಂದ ಇಂಜಿನಿಯರ್ಸ್​ ಡೇ ಆಚರಿಸಲಾಗುವುದು ಎಂದು ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಘೋಷಿಸಿದ್ದಾರೆ. ಸರ್ ಎಂ. ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ ಸರ್ಕಾರದ ವತಿಯಿಂದ ಮಾಲಾರ್ಪಣೆ ಮಾಡಿ, ವಿಶ್ವೇಶ್ವರಯ್ಯ ಅವರ ಕೊಡುಗೆಯನ್ನು ಸ್ಮರಿಸಿದ ಡಿಕೆಶಿ, ಅಭಿವೃದ್ಧಿಗೆ ಅಡಿಪಾಯ ಹಾಕುವ ಇಂಜಿನಿಯರ್‌ಗಳು ದೇಶದ ಆಸ್ತಿ ಎಂದು ಹೇಳಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್ 15: ಮುಂದಿನ ವರ್ಷದಿಂದ ಸರ್ಕಾರದ ವತಿಯಿಂದ ಇಂಜಿನಿಯರ್‌ಗಳ ದಿನವನ್ನು (ಇಂಜಿನಿಯರ್ಸ್​ ಡೇ) ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ಘೋಷಿಸಿದ್ದಾರೆ. ಇಂಜಿನಿಯರ್‌ಗಳ ದಿನಾಚರಣೆ ಅಂಗವಾಗಿ ಬೆಂಗಳೂರಿನಲ್ಲಿ ಸರ್ ಎಂ. ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ ಸರ್ಕಾರದ ಪರವಾಗಿ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಆಚರಣೆಯ ರೂಪುರೇಷೆಗಳನ್ನು ಅಂತಿಮಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಅಭಿವೃದ್ಧಿಗೆ ಅಡಿಪಾಯ ಹಾಕುವವರು ಇಂಜಿನಿಯರ್‌ಗಳು. ದೇಶದ ವಿಜ್ಞಾನಿಗಳು ನಡೆಸುವ ಸಂಶೋಧನೆಗಳನ್ನು ಕಾರ್ಯರೂಪಕ್ಕೆ ತರುವ ಮಹತ್ವದ ಜವಾಬ್ದಾರಿ ಇಂಜಿನಿಯರ್‌ಗಳ ಮೇಲಿದೆ. ಇಂಜಿನಿಯರ್‌ಗಳು ದೇಶದ ಆಸ್ತಿಯಾಗಿದ್ದು, ಅವರ ಕೊಡುಗೆಯನ್ನು ಗುರುತಿಸುವುದು ಸರ್ಕಾರದ ಕರ್ತವ್ಯ ಎಂದು ಮುಖ್ಯಮಂತ್ರಿ ಹೇಳಿದರು.

ಕರ್ನಾಟಕದಲ್ಲಿ ಪ್ರತಿ ವರ್ಷ ಒಂದು ಲಕ್ಷಕ್ಕೂ ಹೆಚ್ಚು ಇಂಜಿನಿಯರ್‌ಗಳು ತಯಾರಾಗುತ್ತಿದ್ದಾರೆ. ಭಾರತದಲ್ಲೇ ಅತಿ ಹೆಚ್ಚು ಇಂಜಿನಿಯರ್‌ಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಪ್ರಮುಖವಾಗಿದೆ. ಹೀಗಾಗಿ ರಾಜ್ಯದ ಉದ್ದಗಲಕ್ಕೂ ಇಂಜಿನಿಯರ್‌ಗಳು ತಮ್ಮ ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದು ಡಿಕೆ ಶಿವಕುಮಾರ್ ಕರೆ ನೀಡಿದರು.

ಹಿಂದೆ ವಾಸ್ತುಶಿಲ್ಪದ ಪರಂಪರೆಯಲ್ಲಿ ಇಂಜಿನಿಯರ್‌ಗಳನ್ನು ಗುರುತಿಸಲಾಗುತ್ತಿತ್ತು. ಆದರೆ, ಈಗ ಇಂಧನ, ಕಟ್ಟಡ ನಿರ್ಮಾಣ, ಮಾಹಿತಿ ತಂತ್ರಜ್ಞಾನ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಇಂಜಿನಿಯರ್‌ಗಳು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ದೇಶದ ಅಭಿವೃದ್ಧಿಯಲ್ಲಿ ಅವರ ಸೇವೆ ಅಪಾರವಾಗಿದೆ. ಸರ್ ಎಂ. ವಿಶ್ವೇಶ್ವರಯ್ಯ ಅವರು ದೇಶಕ್ಕೆ ಮಾದರಿಯಾಗಿದ್ದಾರೆ. ಕರ್ನಾಟಕದ ಅಭಿವೃದ್ಧಿಗೆ ಅವರ ಕೊಡುಗೆ ಅಪಾರವಾಗಿದ್ದು, ಅವರ ಆದರ್ಶಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us