ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್

Edited By:

Updated on: Oct 20, 2026 | 2:11 PM

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಕುಟುಂಬ ಸಮೇತರಾಗಿ ಆಯುಧ ಪೂಜೆಯಲ್ಲಿ ಪಾಲ್ಗೊಂಡರು. ಅರ್ಚಕರ ತಂಡದಿಂದ ಪೂಜಾ ವಿಧಿವಿಧಾನಗಳು ನಡೆದವು. ಬಳಿಕ ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ಮಾತನಾಡಿದ ಅವರು, ಡಿಸೆಂಬರ್ 31ರೊಳಗೆ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ್ದು, ಜಿಬಿಎ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಸಚಿವರಿಗೆ ಸೂಚಿಸಿರುವುದಾಗಿ ತಿಳಿಸಿದರು.

ಬೆಂಗಳೂರು, ಅಕ್ಟೋಬರ್ 20: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆಂಗಳೂರಿನ ಸದಾಶಿವನಗರದಲ್ಲಿರುವ ನಿವಾಸದಲ್ಲಿ ಕುಟುಂಬ ಸಮೇತರಾಗಿ ಆಯುಧ ಪೂಜೆಯಲ್ಲಿ ಪಾಲ್ಗೊಂಡರು. ಅರ್ಚಕರ ತಂಡದ ನೇತೃತ್ವದಲ್ಲಿ ನಿವಾಸದಲ್ಲಿ ವಿಶೇಷ ಪೂಜಾ ವಿಧಿವಿಧಾನಗಳು ನಡೆದವು. ಆಯುಧ ಪೂಜೆಯ ಅಂಗವಾಗಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಶಿವಕುಮಾರ್ ಕುಟುಂಬದ ಸದಸ್ಯರೊಂದಿಗೆ ಭಾಗವಹಿಸಿ ಪೂಜೆ ಸಲ್ಲಿಸಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆ ಸಿದ್ಧತೆಗೆ ಸೂಚನೆ

ಆಯುಧ ಪೂಜೆಯ ಬಳಿಕ ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ಮಾತನಾಡಿದ ಮುಖ್ಯಮಂತ್ರಿ, ಡಿಸೆಂಬರ್ 31ರೊಳಗೆ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ ಎಂದು ತಿಳಿಸಿದರು. ಬೆಂಗಳೂರು ನಗರದಲ್ಲಿಯೂ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಬೇಕಿರುವ ಹಿನ್ನೆಲೆಯಲ್ಲಿ ನಗರದ ಶಾಸಕರನ್ನು ಕರೆದು ಮಾತುಕತೆ ನಡೆಸಿದ್ದಾಗಿ ಹೇಳಿದರು. ಚುನಾವಣಾ ಆಯೋಗ ಯಾವಾಗ ಬೇಕಾದರೂ ಜಿಬಿಎ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಿಸಬಹುದು. ಹೀಗಾಗಿ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಸಚಿವರಿಗೆ ಸೂಚಿಸಿರುವುದಾಗಿ ತಿಳಿಸಿದರು.

ಇದೇ ವೇಳೆ, ಪಂಚಾಯಿತಿ ಮಟ್ಟದಲ್ಲಿ ರಸ್ತೆ ಮತ್ತು ಕುಡಿಯುವ ನೀರಿನ ಸೌಲಭ್ಯಗಳಿಗೆ ಅನುದಾನ ಒದಗಿಸುವ ವಿಚಾರವಾಗಿ ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು ಎಂದು ಹೇಳಿದರು. ಈ ಹಿನ್ನೆಲೆಯಲ್ಲಿ ಬೆಂಗಳೂರು ಶಾಸಕರಿಗೆ ಅನುದಾನ ನೀಡುವ ಸಂಬಂಧ ವರದಿ ಸಲ್ಲಿಸುವಂತೆ ಸೂಚಿಸಿರುವುದಾಗಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Oct 20, 2026 01:59 PM
Loading...
Unable to load recommendations.
Follow Us
ಅನಿಲ್​ ಕಲ್ಕೆರೆ

ಅನಿಲ್ ಕಲ್ಕೆರೆ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 11 ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಸೆಂಟ್ರಲ್ ಕಾಲೇಜು) ದಲ್ಲಿ Msc (ಮಾಸ್ ಕಮ್ಯುನಿಕೇಷನ್) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಸೃಜನಶೀಲ ಬರವಣಿಗೆ ಜೊತೆಗೆ ವಿಧಾನಸೌಧದ ಆಡಳಿತಾತ್ಮಕ ಸುದ್ದಿಗಳೂ ಸೇರಿದಂತೆ, ರಾಜಕೀಯ ಪಕ್ಷಗಳು ಹಾಗೂ ರಾಜಕೀಯದ ಪ್ರಸಕ್ತ ವಿದ್ಯಮಾನಗಳನ್ನ ಒಳಗೊಂಡಂತಹ ಸುದ್ದಿಗಳತ್ತ ಗಮನ ಹರಿಸುತ್ತಿದ್ದಾರೆ. ಜೊತೆಗೆ ಪ್ರಜಾಪ್ರಭುತ್ವ ನಾಲ್ಕನೇ ಆಧಾರ ಸ್ತಂಭವಾಗಿ ಸಾಮಾನ್ಯಜನರ ಪರ ಧ್ವನಿಯಾಗಿ ಸರ್ಕಾರಕ್ಕೆ ಸಮಸ್ಯೆ ಮುಟ್ಟಿಸುವ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದಾರೆ.

Read More