AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶವಂತಪುರ ಎಪಿಎಂಸಿ ಮಾರುಕಟ್ಟೆಯಲ್ಲಿ ಕೂಲಿ ಕಾರ್ಮಿಕರ ಜೊತೆ ಬೆಳಗ್ಗಿನ ಉಪಾಹಾರ ಸೇವಿಸಿದ ಸಿಎಂ ಡಿಕೆ ಶಿವಕುಮಾರ್

ಯಶವಂತಪುರ ಎಪಿಎಂಸಿ ಮಾರುಕಟ್ಟೆಯಲ್ಲಿ ಕೂಲಿ ಕಾರ್ಮಿಕರ ಜೊತೆ ಬೆಳಗ್ಗಿನ ಉಪಾಹಾರ ಸೇವಿಸಿದ ಸಿಎಂ ಡಿಕೆ ಶಿವಕುಮಾರ್

ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Sep 08, 2026 | 11:09 AM

Share

ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ರೈತರು ಮತ್ತು ಕೂಲಿ ಕಾರ್ಮಿಕರೊಂದಿಗೆ ನೇರವಾಗಿ ಸಂವಾದ ನಡೆಸಿದರು. ಈರುಳ್ಳಿ ಮೂಟೆಗಳ ಮೇಲೆ ಕುಳಿತು ರೈತರ ಸಮಸ್ಯೆಗಳನ್ನು ಆಲಿಸಿದ ಅವರು, ಕಾರ್ಮಿಕರೊಂದಿಗೆ ಉಪಾಹಾರ ಸೇವಿಸಿದರು. ಜನಸಾಮಾನ್ಯರೊಂದಿಗೆ ನಾಯಕರು ಬೆರೆತು ಅವರ ಕಷ್ಟಗಳನ್ನು ಅರ್ಥಮಾಡಿಕೊಳ್ಳಲು ಯತ್ನಿಸಿದರು.

ಬೆಂಗಳೂರು, ಸೆಪ್ಟೆಂಬರ್ 8: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ಬೆಳಗ್ಗೆ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿದರು. ಈರುಳ್ಳಿ ಮಂಡಿಗೆ ತೆರಳಿ, ಈರುಳ್ಳಿ ಮತ್ತು ಆಲೂಗಡ್ಡೆ ಬೆಳೆಗಾರರು ಹಾಗೂ ವರ್ತಕರೊಂದಿಗೆ ನೇರವಾಗಿ ಸಂವಾದ ನಡೆಸಿದರು. ಬೆಳೆಗಳ ಉತ್ಪಾದನೆ, ಲಾಭಾಂಶ, ಮತ್ತು ಕಮಿಷನ್ ಕುರಿತು ಮಾಹಿತಿ ಪಡೆದರು. ಮೂಟೆಗಳ ಮೇಲೆ ಕುಳಿತು ಸಿಎಂ ರೈತರ ಸಮಸ್ಯೆಗಳನ್ನು ಆಲಿಸಿದರು. ನಂತರ, ಅಲ್ಲಿನ ಕೂಲಿ ಕಾರ್ಮಿಕರ ಜೊತೆ ಕುಳಿತು ಇಡ್ಲಿ ಸೇವಿಸಿದರು. ಈ ಸಂದರ್ಭದಲ್ಲಿ, ಕಾರ್ಮಿಕರ ಕಷ್ಟ-ಸುಖಗಳನ್ನು ವಿಚಾರಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us