ಕನಕಪುರದಲ್ಲಿ ಡಿಕೆ ಶಿವಕುಮಾರ್ ನೈಟ್​ ರೌಂಡ್ಸ್: ಹಾಸ್ಟೆಲ್​ಗೆ ಭೇಟಿ, ವಿದ್ಯಾರ್ಥಿಗಳ ಜೊತೆಗೆ ಊಟ ಸವಿದು, ಸಮಸ್ಯೆ ಆಲಿಸಿದ ಸಿಎಂ

Edited By:

Updated on: Sep 14, 2026 | 6:26 AM

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕನಕಪುರದಲ್ಲಿ ರಾತ್ರಿ ರೌಂಡ್ಸ್ ನಡೆಸಿ, ಬಿಸಿಎಂ ಹಾಸ್ಟೆಲ್‌ಗೆ ಅನಿರೀಕ್ಷಿತ ಭೇಟಿ ನೀಡಿದರು. ವಿದ್ಯಾರ್ಥಿಗಳೊಂದಿಗೆ ಊಟ ಸವಿದು, ಅವರ ಕೋಣೆಗಳು, ಶೌಚಾಲಯಗಳು ಮತ್ತು ಊಟದ ವ್ಯವಸ್ಥೆಯನ್ನು ಪರಿಶೀಲಿಸಿದರು. ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿ, ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದರು, ಅವರ ಭವಿಷ್ಯಕ್ಕೆ ಪ್ರೋತ್ಸಾಹ ನೀಡಿದರು.

ಕನಕಪುರ, ಸೆಪ್ಟೆಂಬರ್ 14: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ವಕ್ಷೇತ್ರ ಕನಕಪುರದಲ್ಲಿ ಭಾನುವಾರ ರಾತ್ರಿ ರೌಂಡ್ಸ್ ನಡೆಸಿದರು. ಈ ಸಂದರ್ಭದಲ್ಲಿ ಅವರು ಕನಕಪುರದ ಹೌಸಿಂಗ್ ಬೋರ್ಡ್‌ನಲ್ಲಿರುವ ಬಿಸಿಎಂ ಹಾಸ್ಟೆಲ್‌ಗೆ ಅನಿರೀಕ್ಷಿತ ಭೇಟಿ ನೀಡಿದರು. ವಿದ್ಯಾರ್ಥಿಗಳೊಂದಿಗೆ ಮಾತನಾಡಿ ಅವರ ಕೊಠಡಿಗಳು, ಶೌಚಾಲಯಗಳು ಮತ್ತು ಊಟದ ವ್ಯವಸ್ಥೆಯನ್ನು ಖುದ್ದಾಗಿ ಪರಿಶೀಲಿಸಿದರು. ಅಲ್ಲದೆ, ವಿದ್ಯಾರ್ಥಿಗಳೊಂದಿಗೆ ಕುಳಿತು ಊಟ ಸವಿದು, ಅವರ ಸಮಸ್ಯೆಗಳನ್ನು ಆಲಿಸಿದರು. ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಹಿನ್ನೆಲೆ, ಮುಂದಿನ ಯೋಜನೆಗಳು, ಶುಲ್ಕಗಳು ಮತ್ತು ಹಾಸ್ಟೆಲ್‌ನಲ್ಲಿನ ಸೌಲಭ್ಯಗಳ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಹಂಚಿಕೊಂಡರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಹಾಸ್ಟೆಲ್ ವ್ಯವಸ್ಥೆಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು, ಆದರೂ ಶೇ 25 ರಷ್ಟು ಸುಧಾರಣೆಯ ಅಗತ್ಯವಿದೆ ಎಂದು ತಿಳಿಸಿದರು. ವಿದ್ಯಾರ್ಥಿಗಳ ಸಮಸ್ಯೆಗಳನ್ನು ನಿವಾರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಿಎಂ ಅವರ ಅನಿರೀಕ್ಷಿತ ಭೇಟಿಗೆ ವಿದ್ಯಾರ್ಥಿಗಳಿಗೆ ಹರ್ಷ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಡಿಕೆ ಶಿವಕುಮಾರ್ ಬೆಂಗಳೂರಿನ ಯಶವಂತಪುರದ ಎಪಿಎಂಸಿ ಮಾತುಕಟ್ಟೆಗೆ ದಿಢೀರ್ ಆಗಿ ಬೆಳ್ಳಂಬೆಳಗ್ಗೆ ಭೇಟಿ ನೀಡಿ ವರ್ತಕರ ಜತೆ ಹಾಗೂ ಕಾರ್ಮಿಕರ ಜತೆ ಬೆರೆತು ಅವರ ಸಮಸ್ಯೆ ಆಲಿದ್ದು ಸಂಚಲನ ಮೂಡಿಸಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us