AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಡಿಕೆ ಶಿವಕುಮಾರ್ ಮಂಗಳೂರು ಮೀನುಗಾರಿಕೆ ಬಂದರಿಗೆ ದಿಢೀರ್ ಭೇಟಿ: ಧಕ್ಕೆ ಬಂದ್ ಮಾಡಿಸಿದವರ ಅಮಾನತಿಗೆ ಸೂಚನೆ

ಸಿಎಂ ಡಿಕೆ ಶಿವಕುಮಾರ್ ಮಂಗಳೂರು ಮೀನುಗಾರಿಕೆ ಬಂದರಿಗೆ ದಿಢೀರ್ ಭೇಟಿ: ಧಕ್ಕೆ ಬಂದ್ ಮಾಡಿಸಿದವರ ಅಮಾನತಿಗೆ ಸೂಚನೆ

ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Sep 19, 2026 | 8:42 AM

Share

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳೂರು ಮೀನುಗಾರಿಕೆ ಬಂದರು (ಧಕ್ಕೆ) ಪ್ರದೇಶಕ್ಕೆ ಬೆಳ್ಳಂಬೆಳಗ್ಗೆ ದಿಢೀರ್ ಭೇಟಿ ನೀಡಿದರು. ಜಿಲ್ಲಾ ಉಸ್ತುವಾರಿ ಸಚಿವ ಯುಟಿ ಖಾದರ್ ಅವರು ಮುಖ್ಯಮಂತ್ರಿಗಳಿಗೆ ಸಾಥ್ ನೀಡಿದರು. ಸಮುದ್ರದಿಂದ ಬಂದ ತಾಜಾ ಮೀನು ಹಾಗೂ ಮೀನುಗಾರಿಕೆ ಬೋಟ್‌ಗಳನ್ನು ವೀಕ್ಷಿಸಿದ ಸಿಎಂ, ಮೀನುಗಾರರ ಸಮಸ್ಯೆಗಳನ್ನು ಆಲಿಸಿ, ಇಲಾಖೆಯ ಮುಂದಿನ ಯೋಜನೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಮಂಗಳೂರು, ಸೆಪ್ಟೆಂಬರ್ 19: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶನಿವಾರ ಬೆಳ್ಳಂಬೆಳಗ್ಗೆ ಮಂಗಳೂರು ಮೀನುಗಾರಿಕೆ ಬಂದರು ಬಳಿಯ ಧಕ್ಕೆ ಪ್ರದೇಶಕ್ಕೆ ದಿಢೀರ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಯುಟಿ ಖಾದರ್ ಅವರು ಮುಖ್ಯಮಂತ್ರಿಗಳಿಗೆ ಸಾಥ್ ನೀಡಿದರು. ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಸಿಎಂ ಡಿಕೆ ಶಿವಕುಮಾರ್ ಧಕ್ಕೆ ಪ್ರದೇಶವನ್ನು ಕಾಲ್ನಡಿಗೆಯಲ್ಲಿ ಸುತ್ತಿ ವೀಕ್ಷಿಸಿದರು. ಸಮುದ್ರದಿಂದ ಬಂದ ತಾಜಾ ಮೀನುಗಳನ್ನು ಪರಿಶೀಲಿಸಿದ ಸಿಎಂ ಮೀನುಗಾರಿಕೆ ಬೋಟ್‌ಗಳನ್ನೂ ವೀಕ್ಷಿಸಿದರು. ಈ ವೇಳೆ ಅಲ್ಲಿದ್ದ ಮೀನುಗಾರರು ಮುಖ್ಯಮಂತ್ರಿಗಳಿಗೆ ಜೈಕಾರ ಕೂಗಿದರು. ಸಿಎಂ ಅವರು ಮೀನುಗಾರರೊಂದಿಗೆ ಕೆಲಕಾಲ ಮಾತುಕತೆ ನಡೆಸಿ, ಅವರ ಸಮಸ್ಯೆಗಳನ್ನು ಆಲಿಸಿದರು.

ಶುಕ್ರವಾರ ಸಚಿವ ಸಂಪುಟ ಸಭೆಯಲ್ಲಿ ಮೀನುಗಾರಿಕಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹಲವಾರು ಯೋಜನೆಗಳ ಕುರಿತು ಚರ್ಚೆ ನಡೆದಿರುವುದೂ ಗಮನಾರ್ಹ. ಮೀನುಗಾರಿಕಾ ಇಲಾಖಾ ಅಧಿಕಾರಿಗಳು ಹಾಗೂ ಜಿಲ್ಲಾಡಳಿತ ಅಧಿಕಾರಿಗಳು ಮುಂದಿನ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಏತನ್ಮಧ್ಯೆ, ಮೀನುಗಾರಿಕೆ ಧಕ್ಕೆಯಲ್ಲಿ ವ್ಯಾಪಾರ ವಹಿವಾಟು ಬಂದ್ ಆಗಿರುವುದನ್ನು ಗಮನಿಸಿದ ಸಿಎಂ ಆ ಬಗ್ಗೆ ಪ್ರಶ್ನಿಸಿದರು. ಅಲ್ಲದೆ, ಧಕ್ಕೆ ಬಂದ್ ಮಾಡಿಸಿದ ಅಧಿಕಾರಿಗಳ ಅಮಾನತಿಗೆ ಸೂಚನೆ ನೀಡಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us