ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ಡಿಕೆ ಶಿವಕುಮಾರ್ ದಿಢೀರ್ ಭೇಟಿ: ರೈತರು, ವರ್ತಕರ ಬಳಿ ಮಾಹಿತಿ ಪಡೆದ ಸಿಎಂ
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ಸಿಎಂ ಡಿಕೆ ಶಿವಕುಮಾರ್ ಮಂಗಳವಾರ ಬೆಳ್ಳಂಬೆಳಗ್ಗೆ ಭೇಟಿ ನೀಡಿದರು. ರೈತರು ಮತ್ತು ವರ್ತಕರೊಂದಿಗೆ ಮಾಹಿತಿ ಪಡೆದ ಸಿಎಂ, ತೂಕದಲ್ಲಿ ಮೋಸ ನಡೆಯುತ್ತಿದೆಯೇ ಎಂದು ಪ್ರಶ್ನಿಸಿದರು. ಕೃಷಿ ಸಚಿವರ ಭೇಟಿ ಕೊರತೆಯ ಬಗ್ಗೆ ರೈತರು ದೂರು ನೀಡಿದರು. ಸಿಎಂ ರೈತರ ಸಮಸ್ಯೆಗಳನ್ನು ಆಲಿಸಿದರು.
ಬೆಂಗಳೂರು, ಸೆಪ್ಟೆಂಬರ್ 8: ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ಮಂಗಳವಾರ ಬೆಳ್ಳಂಬೆಳಗ್ಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ನೀಡಿದರು. ಮಾರುಕಟ್ಟೆಯಲ್ಲಿನ ರೈತರು ಮತ್ತು ವರ್ತಕರ ಬಳಿ ಮಾಹಿತಿ ಪಡೆದು ಅವರ ಸಮಸ್ಯೆಗಳನ್ನು ಆಲಿಸಿದರು. ಈ ಸಂದರ್ಭದಲ್ಲಿ ಡಿಕೆ ಶಿವಕುಮಾರ್, ತೂಕದಲ್ಲಿ ಮೋಸ ನಡೆಯುತ್ತಿದೆಯೇ ಎಂದು ರೈತರನ್ನು ನೇರವಾಗಿ ಪ್ರಶ್ನಿಸಿದರು.
ರೈತರು ತಮಗೆ ಎದುರಾಗುತ್ತಿರುವ ವಿವಿಧ ಸಮಸ್ಯೆಗಳನ್ನು ಸಿಎಂ ಮುಂದೆ ತೋಡಿಕೊಂಡರು. ಅಳಲನ್ನು ವ್ಯಕ್ತಪಡಿಸಿದ ರೈತರು, ಕೃಷಿ ಸಚಿವರು ಮಾರುಕಟ್ಟೆಗೆ ಬಂದು ತಮ್ಮ ಸಮಸ್ಯೆಗಳನ್ನು ಆಲಿಸುತ್ತಿಲ್ಲ ಎಂದು ಮುಖ್ಯಮಂತ್ರಿಗಳಿಗೆ ದೂರಿದರು. ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸಿದ ಸಿಎಂ, ರೈತರಿಗೆ ಆಶ್ವಾಸನೆ ನೀಡಿದರು. ಮುಖ್ಯಮಂತ್ರಿಗಳ ಭೇಟಿಯಿಂದಾಗಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗಬಹುದೆಂಬ ಭರವಸೆಯನ್ನು ರೈತರು ವ್ಯಕ್ತಪಡಿಸಿದರು. ಯಶವಂತಪುರ ಎಪಿಎಂಸಿ ಮಾರುಕಟ್ಟೆಯ ಸುಗಮ ಕಾರ್ಯನಿರ್ವಹಣೆ ಮತ್ತು ರೈತರ ಹಿತಾಸಕ್ತಿಗಳನ್ನು ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಭರವಸೆ ನೀಡಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

