AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂದರು ಪ್ರದೇಶದಲ್ಲಿ ಬೋಟ್ ಹತ್ತಿ ಸಮುದ್ರಕ್ಕಿಳಿದೇ ಬಿಟ್ರು ಸಿಎಂ ಡಿಕೆ ಶಿವಕುಮಾರ್

ಬಂದರು ಪ್ರದೇಶದಲ್ಲಿ ಬೋಟ್ ಹತ್ತಿ ಸಮುದ್ರಕ್ಕಿಳಿದೇ ಬಿಟ್ರು ಸಿಎಂ ಡಿಕೆ ಶಿವಕುಮಾರ್

ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Sep 19, 2026 | 9:54 AM

Share

ಮಂಗಳೂರಿನ ಬಂದರು ಪ್ರದೇಶಕ್ಕೆ ಬೆಳ್ಳಂಬೆಳಗ್ಗೆ ಭೇಟಿ ನೀಡಿದ ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಏಕಾಏಕಿ ಮೀನುಗಾರಿಕಾ ಬೋಟ್‌ ಹತ್ತಿ ಅಳಿವೆಬಾಗಿಲು ಪ್ರದೇಶದಲ್ಲಿ ಸಂಚರಿಸಿದರು. ಮೀನುಗಾರರ ಸಮಸ್ಯೆಗಳನ್ನು ಆಲಿಸಿದ ಬಳಿಕ ತಾಜ್‌ ಹೋಟೆಲ್‌ನಲ್ಲಿ ಉಪಾಹಾರ ಸೇವಿಸಿದರು. ಡಿಕೆ ಶಿವಕುಮಾರ್ ಬೋಟ್ ಹತ್ತಿ ಸಂಚರಿಸಿದ ವಿಡಿಯೋ ಇಲ್ಲಿದೆ ನೋಡಿ.

ಮಂಗಳೂರು, ಸೆಪ್ಟೆಂಬರ್ 19: ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಶನಿವಾರ ಬೆಳಗ್ಗೆಯೇ ಮಂಗಳೂರಿನ ಬಂದರು ಪ್ರದೇಶಕ್ಕೆ ಭೇಟಿ ನೀಡಿ, ಮೀನುಗಾರಿಕಾ ಬೋಟ್‌ನಲ್ಲಿ ಅಳಿವೆಬಾಗಿಲು ಪ್ರದೇಶದ ವಸ್ತುಸ್ಥಿತಿ ಪರಿಶೀಲಿಸಿದರು. ಬೆಳ್ಳಂಬೆಳಗ್ಗೆ ಮಂಗಳೂರಿನ ಮೀನುಗಾರಿಕೆ ಧಕ್ಕೆಗೆ ತೆರಳಿದ ಮುಖ್ಯಮಂತ್ರಿ, ಮೀನುಗಾರಿಕಾ ಬೋಟ್‌ಗಳನ್ನು ವೀಕ್ಷಿಸಿದರು. ಸದಾ ಪ್ರಕ್ಷುಬ್ಧವಾಗಿರುವ ಅಳಿವೆಬಾಗಿಲು ಪ್ರದೇಶದಲ್ಲಿ ಸಮುದ್ರದಿಂದ ದಡ ಸೇರುವ ಸ್ಥಳದ ಪರಿಸ್ಥಿತಿಯನ್ನು ಮುಖ್ಯಮಂತ್ರಿ ಬೋಟ್‌ನಲ್ಲಿ ಸಂಚರಿಸುವ ಮೂಲಕ ಅರಿತುಕೊಂಡರು. ಮೀನುಗಾರರೊಂದಿಗೆ ಮಾತುಕತೆ ನಡೆಸಿದ ಅವರು, ಸಮಸ್ಯೆಗಳನ್ನು ಆಲಿಸಿದರು.

ಡಿಕೆ ಶಿವಕುಮಾರ್‌ ಅವರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌ ಕೂಡ ಇದ್ದರು. ಬಂದರು ಪ್ರದೇಶದಲ್ಲಿ ಮೀನುಗಾರಿಕಾ ಚಟುವಟಿಕೆಗಳು ಹಾಗೂ ಬೋಟ್‌ಗಳ ಸಂಚಾರವನ್ನು ವೀಕ್ಷಿಸಿದ ಬಳಿಕ ಮುಖ್ಯಮಂತ್ರಿ ಅಲ್ಲಿಂದ ತೆರಳಿದರು. ಬಳಿಕ ಮಂಗಳೂರಿನ ತಾಜ್‌ ಹೋಟೆಲ್‌ನಲ್ಲಿ ಮುಖ್ಯಮಂತ್ರಿ ಉಪಾಹಾರ ಸೇವಿಸಿದರು. ಖಾದರ್‌, ವಿಧಾನ ಪರಿಷತ್‌ ಸದಸ್ಯ ಐವನ್‌ ಡಿಸೋಜಾ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಪದ್ಮರಾಜ್‌ ಸೇರಿದಂತೆ ಹಲವು ಮುಖಂಡರು ಈ ವೇಳೆ ಉಪಸ್ಥಿತರಿದ್ದರು. ಬನ್ಸ್‌, ತುಪ್ಪದೋಸೆ, ಕಾಶಿ ಹಲ್ವಾ, ಇಡ್ಲಿ ಮತ್ತು ವಡೆ ಸೇರಿದಂತೆ ವಿವಿಧ ತಿಂಡಿಗಳನ್ನು ಮುಖ್ಯಮಂತ್ರಿ ಸೇವಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More