AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

5ನೇ ತರಗತಿಯ ಕ್ಯಾನ್ಸರ್ ಪೀಡಿತ ವಿದ್ಯಾರ್ಥಿನಿಗೆ ಜಪಾನ್‌ನಿಂದಲೇ ವಿಡಿಯೋ ಕರೆ ಮಾಡಿ ಧೈರ್ಯ ತುಂಬಿದ ಡಿಕೆ ಶಿವಕುಮಾರ್

5ನೇ ತರಗತಿಯ ಕ್ಯಾನ್ಸರ್ ಪೀಡಿತ ವಿದ್ಯಾರ್ಥಿನಿಗೆ ಜಪಾನ್‌ನಿಂದಲೇ ವಿಡಿಯೋ ಕರೆ ಮಾಡಿ ಧೈರ್ಯ ತುಂಬಿದ ಡಿಕೆ ಶಿವಕುಮಾರ್

ಗಣಪತಿ ಶರ್ಮಾ
|

Updated on:Nov 25, 2026 | 7:07 AM

Share

ಜಪಾನ್ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಲೆಟ್ ರೈಲು ಪ್ರಯಾಣದ ಅನುಭವ ಹಂಚಿಕೊಂಡಿದ್ದಾರೆ. ಇದೇ ವೇಳೆ, ಕ್ಯಾನ್ಸರ್‌ನಿಂದ ಬಳಲುತ್ತಿರುವ ತುಮಕೂರಿನ 5ನೇ ತರಗತಿ ವಿದ್ಯಾರ್ಥಿನಿಯೊಬ್ಬಳಿಗೆ ವಿಡಿಯೋ ಕರೆ ಮಾಡಿ ಆತ್ಮಸ್ಥೈರ್ಯ ತುಂಬಿದ್ದಾರೆ. ಆದಷ್ಟು ಬೇಗ ಗುಣಮುಖಳಾಗಿ ಭೇಟಿಯಾಗುವುದಾಗಿ ಭರವಸೆ ನೀಡಿದರು. ಕರ್ನಾಟಕದಲ್ಲೂ ಜಪಾನ್ ಮಾದರಿ ರೈಲು ನಿಲ್ದಾಣ ನಿರ್ಮಿಸುವ ಅಭಿಲಾಷೆ ವ್ಯಕ್ತಪಡಿಸಿದ್ದಾರೆ.

ತುಮಕೂರು, ನವೆಂಬರ್ 25: ಜಪಾನ್ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕ್ಯಾನ್ಸರ್‌ನಿಂದ ಬಳಲುತ್ತಿರುವ ತುಮಕೂರಿನ 5ನೇ ತರಗತಿ ವಿದ್ಯಾರ್ಥಿನಿಗೆ ವಿಡಿಯೋ ಕರೆ ಮಾಡಿ ಧೈರ್ಯ ತುಂಬಿದ್ದಾರೆ. ‘‘ಏನಾಗುವುದಿಲ್ಲ, ಧೈರ್ಯವಾಗಿರು. ಈ ಸಂದರ್ಭದಲ್ಲಿ ಮಾನಸಿಕವಾಗಿ ಕುಂದಬೇಡ. ಭಗವಂತ ಇದ್ದಾನೆ, ಏನು ಆಗಲ್ಲ, ಆರೋಗ್ಯವಾಗಿ ಇರುತ್ತೀಯಾ. ಇಂಪಾಸಿಬಲ್ ಎಂಬ ಪದವೇ ಇಲ್ಲ, ಎಲ್ಲವೂ ಪಾಸಿಬಲ್’’ ಎಂದು ಬಾಲಕಿಗೆ ಅಭಯ ನೀಡಿದರು. ಒಂದು ವರ್ಷದಿಂದ ಚಿಕಿತ್ಸೆ ಪಡೆಯುತ್ತಿರುವ ಆ ಬಾಲಕಿಯನ್ನು ತಾವು ಜಪಾನ್‌ನಿಂದ ಹಿಂತಿರುಗಿದ ನಂತರ ಭೇಟಿ ನೀಡುವುದಾಗಿ ಭರವಸೆ ನೀಡಿದರು. ಸಿಎಂ ಅವರ ಈ ನಡೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಮತ್ತೊಂದೆಡೆ, ಬುಲೆಟ್ ರೈಲು ಪ್ರಯಾಣದ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಅಲ್ಲಿನ ರೈಲು ನಿಲ್ದಾಣಗಳ ಸ್ವಚ್ಛತೆ, ರೈಲಿನ ವೇಗ ಮತ್ತು ಸಮಯ ಪಾಲನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜಪಾನ್ ಮಾದರಿಯ ಅತ್ಯಾಧುನಿಕ ರೈಲು ನಿಲ್ದಾಣಗಳನ್ನು ಕರ್ನಾಟಕದಲ್ಲೂ ನಿರ್ಮಿಸುವ ಆಶಯವನ್ನು ಹೊಂದಿರುವುದಾಗಿ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Nov 25, 2026 07:03 AM

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More