AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ

40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ

ಈರಣ್ಣಾ ಬಸವಾ
| Edited By: |

Updated on: Sep 09, 2026 | 12:38 PM

Share

ಸಿಎಂ ಡಿಕೆ ಶಿವಕುಮಾರ್ ಅವರು ಇಡಿ ದಾಳಿಗಳ ಕುರಿತು ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರವನ್ನು ಮತ್ತು ಪಕ್ಷವನ್ನು ಬಿಜೆಪಿ ರಾಜಕೀಯವಾಗಿ ಟಾರ್ಗೆಟ್ ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ. ತಮ್ಮ 40 ಶಾಸಕರು, ಸಚಿವರನ್ನು ಗುರಿಯಾಗಿಸಿ ದಾಳಿ ನಡೆಯಬಹುದು ಎಂದು ಡಿಕೆಶಿ ಎಚ್ಚರಿಸಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್ 9: ಸಚಿವ ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯದ (ಇ.ಡಿ) ದಾಳಿ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರ ಹಾಗೂ ಪಕ್ಷವನ್ನು ರಾಜಕೀಯವಾಗಿ ಗುರಿಯಾಗಿಸಲು ಇ.ಡಿ ಅಸ್ತ್ರವನ್ನು ಬಳಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ತಮ್ಮೆಲ್ಲಾ ಸಚಿವರಿಗೆ ಎಚ್ಚರಿಕೆಯ ಮಾತುಹೇಳಿರುವ ಡಿಕೆ ಶಿವಕುಮಾರ್, ಇ.ಡಿ ಯಾರನ್ನೂ ಬಿಡುವುದಿಲ್ಲ, ಸುಳ್ಳು ಕಥೆ ಕಟ್ಟಿ, ಸುಳ್ಳು ಆರೋಪಗಳನ್ನು ಮಾಡಿ ಜನರನ್ನು ತಪ್ಪು ದಾರಿಗೆ ಎಳೆಯಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಸುಮಾರು 40 ಮಂದಿ ಕಾಂಗ್ರೆಸ್ ಶಾಸಕರು ಮತ್ತು ಸಚಿವರನ್ನು ಇ.ಡಿ ಗುರಿಯಾಗಿಸಬಹುದು. ನಮ್ಮ ಎಚ್ಚರಿಕೆಯಲ್ಲಿ ನಾವಿರಬೇಕು ಎಂದು ಡಿಕೆ ಶಿವಕುಮಾರ್ ಸಲಹೆ ನೀಡಿದ್ದಾರೆ. ಬಿಜೆಪಿ ನಾಯಕರ ವಿರುದ್ಧದ ಹಳೆಯ ಎಫ್‌ಐಆರ್‌ಗಳು, ವಿಶೇಷವಾಗಿ ಭೋವಿ ಇಲಾಖೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಇ.ಡಿ ಏಕೆ ಇನ್ನೂ ತನಿಖೆ ನಡೆಸಿಲ್ಲ ಎಂದು ಅವರು ಪ್ರಶ್ನಿಸಿದರು. ಇದು ಬಿಜೆಪಿಯ ರಾಜಕೀಯ ಪ್ರೇರಿತ ತಂತ್ರ ಎಂದು ಅವರು ಪುನರುಚ್ಚರಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಈರಣ್ಣಾ ಬಸವಾ
ಈರಣ್ಣಾ ಬಸವಾ

ಈರಣ್ಣಾ ಬಸವಾ.. ಮೂಲತಃ ವಾಣಿಜ್ಯ ನಗರಿ ಹುಬ್ಬಳ್ಳಿಯವರು. ಈರಣ್ಣಾ ಬಿ.ಕಾಮ್ ಪದವೀಧರರಾಗಿದ್ದಾರೆ. ಕಂಟೆಂಟ್ ರೈಟರ್ ಆಗಿ ವೃತ್ತಿಜೀವನ ಆರಂಭಿಸಿದ ನಂತರ ಕನ್ನಡದ ಬೇರೆ ಬೇರೆ ಸುದ್ದಿ ಮಾದ್ಯಮದಲ್ಲಿ ಸುಮಾರು ೬ ವರ್ಷ ಕಾಲ ಡೆಸ್ಕ್ ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸದ್ಯ ಸತತ ಪರಿಶ್ರಮದಿಂದ ಟಿವಿ9 ಕನ್ನಡದಲ್ಲಿ ರಾಜಕೀಯ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಹಲವು ಎಕ್ಸ್ ಕ್ಲೂಸಿವ್ ಸುದ್ದಿಗಳನ್ನು ಹೆಕ್ಕಿ ತೆಗೆದಿದ್ದಾರೆ. ಸಿಎಂ, ಡಿಸಿಎಂ ಬೀಟ್ ಜವಾಬ್ದಾರಿ ಇವರ ಮೇಲಿದ್ದು ಜನರಿಗೆ ಸಿಗಬೇಕಾದ ಅಮೂಲ್ಯ ಸುದ್ದಿಗಳನ್ನು ತಲುಪಿಸುವ ಕಾಯಕವನ್ನು ಜವಾಬ್ದಾರಿಯಿಂದ ಮಾಡುತ್ತಿದ್ದಾರೆ. ಬರವಣಿಗೆ, ಕತೆ, ಕವನ ಇವರ ಆಸಕ್ತಿಯ ಕ್ಷೇತ್ರ.

Read More