ಸಿದ್ದರಾಮಯ್ಯ-ಡಿ.ಕೆ. ಶಿವಕುಮಾರ್​​ ನಡುವೆ ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!

Edited By:

Updated on: Jan 08, 2026 | 1:11 PM

ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರ ಹಂಚಿಕೆ ವಿಚಾರ ಮತ್ತೆ ಮುಂದೂಡಲ್ಪಟ್ಟಿದೆ ಎನ್ನಲಾಗಿದೆ. ಅಸ್ಸಾಂ ಮತ್ತು ತಮಿಳುನಾಡು ಚುನಾವಣೆಗಳು ಮುಗಿಯುವವರೆಗೂ ನಾಯಕತ್ವ ಬದಲಾವಣೆ ಕಷ್ಟ ಎಂಬ ಮಾತುಗಳು ಕೇಳಿಬಂದಿವೆ. ಇತ್ತೀಚೆಗೆ, ಸಿಎಂ ಸಿದ್ದರಾಮಯ್ಯ 'ಎಷ್ಟು ದಿನ ಇರುತ್ತೇವೋ ಗೊತ್ತಿಲ್ಲ' ಎಂದು ಹೇಳಿದ್ದರೆ, ಡಿಕೆ ಶಿವಕುಮಾರ್ 'ಕೊಟ್ಟ ಮಾತಿಗೆ' ಬದ್ಧರಾಗಿರಬೇಕು ಎಂದು ಹೇಳಿರೋದು ನಾನಾ ಚರ್ಚೆಗಳಿಗೆ ಕಾರಣವಾಗಿತ್ತು.

ಬೆಂಗಳೂರು, ಜನವರಿ 08: ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆಯ ಗಡುವು ಮತ್ತೆ ಮುಂದಕ್ಕೆ ಹೋಗಿದೆ. ಪಂಚರಾಜ್ಯ ಚುನಾವಣೆ ಮುಗಿಯುವವರೆಗೂ ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳದಿರಲು ಹೈಕಮಾಂಡ್​​ ನಿರ್ಧರಿಸಿದೆ ಎನ್ನಲಾಗಿದೆ. ಇತ್ತೀಚೆಗೆ, ಸಿಎಂ ಸಿದ್ದರಾಮಯ್ಯ ‘ಎಷ್ಟು ದಿನ ಇರುತ್ತೇವೋ ಗೊತ್ತಿಲ್ಲ’ ಎಂದು ಹೇಳಿದ್ದರೆ, ಡಿ.ಕೆ. ಶಿವಕುಮಾರ್ ‘ಕೊಟ್ಟ ಮಾತಿಗೆ’ ಬದ್ಧರಾಗಿರಬೇಕು ಎಂದು ಹೇಳಿರೋದು ನಾನಾ ಚರ್ಚೆಗಳಿಗೆ ಕಾರಣವಾಗಿತ್ತು. ದೇವರಾಜು ಅರಸು ಅವರ ದಾಖಲೆಯನ್ನೂ ಸಿಎಂ ಆಗಿ ಸಿದ್ದರಾಮಯ್ಯ ಮುರಿದಿರುವ ಕಾರಣ, ಅಧಿಕಾರ ಹಸ್ತಾಂತರ ವಿಚಾರ ಮತ್ತೆ ಮುನ್ನೆಲೆಗೆ ಬಂದಿತ್ತು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jan 08, 2026 01:09 PM