ಮೈಸೂರಿನಲ್ಲಿ ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗಿ ರಾಹುಲ್ ರಹಸ್ಯ ಮಾತು!
ತಮಿಳುನಾಡಿಗೆ ತೆರಳಲು ದೆಹಲಿಯಿಂದ ವಿಮಾನದ ಮೂಲಕ ಮೈಸೂರಿಗೆ ಬಂದ ರಾಹುಲ್ ಗಾಂಧಿಯನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸ್ವಾಗತಿಸಿದರು. ಆದ್ರೆ, ಇದೇ ವೇಳೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಪ್ರತ್ಯೇಕವಾಗಿ ರಾಹುಲ್ ಗಾಂಧಿ ಜತೆ ಮಾತುಕತೆ ನಡೆಸಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಡಿಕೆ ಶಿವಕುಮಾರ್ ರಾಹುಲ್ ಗಾಂಧಿಯನ್ನು ಸೈಡಿಗೆ ಕರೆದುಕೊಂಡು ಹೋಗಿ ಮಾತನಾಡಿದ್ದಾರೆ. ಬಳಿಕ ರಾಹುಲ್ ಗಾಂಧಿ ಡಿಕೆಶಿಯನ್ನು ಬಿಟ್ಟು ಸಿದ್ದರಾಮಯ್ಯನವರನ್ನು ಪಕ್ಕಕ್ಕೆ ಕರೆದುಕೊಂಡು ಚರ್ಚಿಸಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಮೈಸೂರು, (ಜನವರಿ 13): ಕರ್ನಾಟಕ ಕಾಂಗ್ರೆಸ್ನಲ್ಲಿ (Karnataka Congress) ಸಿಎಂ ಕುರ್ಚಿ ಕಿತ್ತಾಟ ಮುಂದುವರೆದಿದೆ. ಸಂಕ್ರಾಂತಿ ಬಳಿಕ ದೆಹಲಿಗೆ ತೆರಳಿ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಲು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಪ್ಲ್ಯಾನ್ ಮಾಡಿದ್ದಾರೆ. ಸೋನಿಯಾಗಾಂಧಿ, ರಾಹುಲ್ ಗಾಂಧಿ ಅವರ ಮನವೊಲಿಸಿ ಸಿಎಂ ಹುದ್ದೆ ಪಡೆಯಬೇಕೆಂಬ ತಂತ್ರ ರೂಪಿಸಿದ್ದಾರೆ. ಆದ್ರೆ, ಈ ಎಲ್ಲಾ ಬೆಳವಂಣಿಗೆಗಳ ನಡುವೆ ಮೈಸೂರಿನಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಹೌದು.. ತಮಿಳುನಾಡಿಗೆ ತೆರಳಲು ದೆಹಲಿಯಿಂದ ವಿಮಾನದ ಮೂಲಕ ಮೈಸೂರಿಗೆ ಬಂದ ರಾಹುಲ್ ಗಾಂಧಿಯನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸ್ವಾಗತಿಸಿದರು. ಆದ್ರೆ, ಇದೇ ವೇಳೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಪ್ರತ್ಯೇಕವಾಗಿ ರಾಹುಲ್ ಗಾಂಧಿ ಜತೆ ಮಾತುಕತೆ ನಡೆಸಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಡಿಕೆ ಶಿವಕುಮಾರ್ ರಾಹುಲ್ ಗಾಂಧಿಯನ್ನು ಸೈಡಿಗೆ ಕರೆದುಕೊಂಡು ಹೋಗಿ ಮಾತನಾಡಿದ್ದಾರೆ. ಬಳಿಕ ರಾಹುಲ್ ಗಾಂಧಿ ಡಿಕೆಶಿಯನ್ನು ಬಿಟ್ಟು ಸಿದ್ದರಾಮಯ್ಯನವರನ್ನು ಪಕ್ಕಕ್ಕೆ ಕರೆದುಕೊಂಡು ಚರ್ಚಿಸಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ.
