Bengaluru pothole issue: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಕೌಂಟರ್
ರಸ್ತೆ ಗುಂಡಿಗಳ ವಿಚಾರವಾಗಿ ರಾಜ್ಯ ಸರ್ಕಾರದ ಮೇಲೆ ಮುಗಿಬಿದ್ದಿದ್ದ ವಿಪಕ್ಷಗಳಿಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಕೌಂಟರ್ ಕೊಟ್ಟಿದ್ದಾರೆ. ತಮ್ಮದೇ ಸರ್ಕಾರ ಇದ್ದಾಗ ಬಿಜೆಪಿಗರು ರಸ್ತೆ ಗುಂಡಿಗಳನ್ನ ಮುಚ್ಚಲಿಲ್ಲ. ಆದರೆ ಈಗ ನಾವು ಅವುಗಳನ್ನ ಮುಚ್ಚುವ ಕೆಲಸ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.
ಬೆಂಗಳೂರು, ಸೆಪ್ಟೆಂಬರ್ 25: ರಸ್ತೆಗುಂಡಿಗಳ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸ್ತಿರೋ ವಿಪಕ್ಷಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ದಾರೆ. ಪಾಪ ಅವರ ಸರ್ಕಾರ ಇದ್ದಾಗ ರಸ್ತೆ ಗುಂಡಿಗಳನ್ನ ಮುಚ್ಚಲಿಲ್ಲ. ಈಗ ನಾವು ಗುಂಡಿ ಮುಚ್ಚುತ್ತಿದ್ದೇವೆ ಎಂದು ಸಿಎಂ ತಿರುಗೇಟು ನೀಡಿದ್ದಾರೆ. ರಸ್ತೆ ಗುಂಡಿಗಳ ವಿಚಾರವಾಗಿ ರಾಜ್ಯ ರಾಜಧಾನಿ ಬೆಂಗಳೂರು ಮಾತ್ರವಲ್ಲದೆ ಕರ್ನಾಟಕದಾದ್ಯಂತ ಬಿಜೆಪಿ ಹೋರಾಟ ನಡೆಸಿತ್ತು. ವಿಪಕ್ಷ ನಾಯಕ ಆರ್. ಅಶೋಕ್, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿ ಹಲವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.
Published on: Sep 25, 2025 05:12 PM
