ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳ ಜಾರಿಯ ನಂತರ ನನ್ನನ್ನು ಮುಗಿಸಲು ಷಡ್ಯಂತ್ರಗಳು ನಡೆಯುತ್ತಿವೆ. ಕೆಲವು ಪಟ್ಟಭದ್ರ ಹಿತಾಸಕ್ತಿಗಳ ಬಗ್ಗೆ ಪ್ರತಿಯೊಬ್ಬರೂ ಎಚ್ಚರವಾಗಿರಬೇಕು. ಬಸವಣ್ಣ, ಸಂಗೊಳ್ಳಿ ರಾಯಣ್ಣನನ್ನೇ ಈ ಹಿತಶತ್ರಗಳು ಬಿಡಲಿಲ್ಲ. ಮೊದಲು ಗ್ಯಾರಂಟಿ ನಿಲ್ಲಿಸುತ್ತಾರೆಂದು ಪುಕಾರು ಹಬ್ಬಿಸಿದ್ದರು. ಅದು ಆಗದಿದ್ದಾಗ ಸರ್ಕಾರ ದಿವಾಳಿಯಾಗಿದೆ ಎಂದು ಆರೋಪ ಹೊರಿಸಿದರು. ನಾನು ಅಧಿಕಾರದಲ್ಲಿ ಇರುವವರೆಗೆ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕಲಬುರ್ಗಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನನ್ನನ್ನು ಅಧಿಕಾರದಿಂದ ತೆಗೆಯಬೇಕೆಂದು ಹುನ್ನಾರ ನಡೆಸುತ್ತಿದ್ದಾರೆ. ಅದಕ್ಕೆ ನೀವು ಅವಕಾಶ ಮಾಡಿಕೊಡಬೇಡಿ. ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದ ನಂತರ ನನ್ನನ್ನು ಮುಗಿಸಲು ಪ್ರಯತ್ನಗಳು ನಡೆಯುತ್ತಿವೆ. ನನ್ನನ್ನು ಮುಗಿಸಲು ನೀವು ಬಿಡ್ತೀರಾ? ಎಂದು ಜನರಿಗೆ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ
ಇನ್ನಷ್ಟು ಕರ್ನಾಟಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:07 pm, Mon, 16 September 24