ದಿಲ್ಲಿಗೆ ಹೋಗಿರುವ ಡಿಕೆಶಿ ಬಣಕ್ಕೆ ಖಡಕ್ ಸಂದೇಶ ರವಾನಿಸಿದ ಸಿದ್ದರಾಮಯ್ಯ
ಕರ್ನಾಟಕ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆ ಶುರುವಾಗಿದೆ. ಹೌದು...ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನುಡುವೆ ಅಂತರ್ಯುದ್ಧ ತೀವ್ರವಾಗಿದೆ. ನಾಯಕತ್ವ ಬದಲಾವಣೆಗೆ ಡಿಕೆ ಶಿವಕುಮಾರ್ ಬಣ ಪಟ್ಟು ಹಿಡಿದಿದ್ದು, ಈ ಸಂಬಂಧ ಹೈಕಮಾಂಡ್ ನಾಯಕರ ಜತೆ ಚರ್ಚಿಸಲು ಡಿಕೆಶಿ ಬಣದ ಶಾಸಕರು, ಸಚಿವರು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಇನ್ನು ಡಿಕೆ ಶಿವಕುಮಾರ್ ಬೆಂಬಿಲತ ಶಾಸಕರ ನಿಯೋಗ ದೆಹಲಿಯಲ್ಲಿ ದಾಳ ಉರುಳಿಸಲು ಪ್ಲಾನ್ ಮಾಡುತ್ತಿದ್ದಂತೆ ಇತ್ತ ಸಚಿವ ಸತೀಶ್ ಜಾರಕಿಹೊಳಿ ಮನೆಯಲ್ಲಿ ದಲಿತ ಶಾಸಕರ ಡಿನ್ನರ್ ಮೀಟಿಂಗ್ ನಡೆದಿದೆ. ಈ ಎಲ್ಲಾ ಬೆಣವಣಿಗೆಗಳ ನಡುವೆ ಸಿಎಂ ಸಿದ್ದರಾಮಯ್ಯ ಮಾತನಾಡಿ, ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ. ನಾನೇ ಬಜೆಟ್ ಮಂಡಿಸುತ್ತೇನೆ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ. ಈ ಮೂಲಕ ಡಿಕೆಶಿ ಬಣದ ಶಾಸಕರಿಗೆ ಸಂದೇಶ ರವಾನಿಸಿದ್ದಾರೆ.
ಮೈಸೂರು, (ನವೆಂಬರ್ 21): ಕರ್ನಾಟಕ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆ ಶುರುವಾಗಿದೆ. ಹೌದು…ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನುಡುವೆ ಅಂತರ್ಯುದ್ಧ ತೀವ್ರವಾಗಿದೆ. ನಾಯಕತ್ವ ಬದಲಾವಣೆಗೆ ಡಿಕೆ ಶಿವಕುಮಾರ್ ಬಣ ಪಟ್ಟು ಹಿಡಿದಿದ್ದು, ಈ ಸಂಬಂಧ ಹೈಕಮಾಂಡ್ ನಾಯಕರ ಜತೆ ಚರ್ಚಿಸಲು ಡಿಕೆಶಿ ಬಣದ ಶಾಸಕರು, ಸಚಿವರು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಇನ್ನು ಡಿಕೆ ಶಿವಕುಮಾರ್ ಬೆಂಬಿಲತ ಶಾಸಕರ ನಿಯೋಗ ದೆಹಲಿಯಲ್ಲಿ ದಾಳ ಉರುಳಿಸಲು ಪ್ಲಾನ್ ಮಾಡುತ್ತಿದ್ದಂತೆ ಇತ್ತ ಸಚಿವ ಸತೀಶ್ ಜಾರಕಿಹೊಳಿ ಮನೆಯಲ್ಲಿ ದಲಿತ ಶಾಸಕರ ಡಿನ್ನರ್ ಮೀಟಿಂಗ್ ನಡೆದಿದೆ. ಈ ಎಲ್ಲಾ ಬೆಣವಣಿಗೆಗಳ ನಡುವೆ ಸಿಎಂ ಸಿದ್ದರಾಮಯ್ಯ ಮಾತನಾಡಿ, ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ. ನಾನೇ ಬಜೆಟ್ ಮಂಡಿಸುತ್ತೇನೆ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ. ಈ ಮೂಲಕ ಡಿಕೆಶಿ ಬಣದ ಶಾಸಕರಿಗೆ ಸಂದೇಶ ರವಾನಿಸಿದ್ದಾರೆ.
ನಿಮಗೆ ಯಾಕೆ ಅನುಮಾನ? ಮತ್ತೆ ಮತ್ತೆ ಅದನ್ನೇ ಏಕೆ ಕೇಳುತ್ತೀರಿ? ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ಮಾತನಾಡಿದೆಯಾ? ನಾಯಕತ್ವ, ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತೆ. ಈ ಬಗ್ಗೆ ಹೈಕಮಾಂಡ್ ಇಲ್ಲಿಯವರೆಗೆ ಏನಾದ್ರೂ ಮಾತನಾಡಿದೆಯಾ? ಹೈಕಮಾಂಡ್ ಈ ಬಗ್ಗೆ ಮಾತಾಡಿಲ್ಲ. ಹಾಗಾದ್ರೆ ಮತ್ತೆ ಯಾಕೆ ಆ ಪ್ರಶ್ನೆ? ಹೈಕಮಾಂಡ್ ಹೇಳಿದ್ದನ್ನು ನಾನು, ಡಿಸಿಎಂ ಡಿಕೆ, ಶಾಸಕರು ಪಾಲಿಸಬೇಕು ಎಂದು ಸ್ಪಷ್ಟಪಡಿಸಿದರು.

