ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು

Updated on: Mar 07, 2026 | 2:06 PM

ಮುಖ್ಯಮಂತ್ರಿ ಸಿದ್ದಮಯ್ಯ ಅವರು ಕರ್ನಾಟಕದಲ್ಲಿ 17 ಬಜೆಟ್‌ಗಳನ್ನು ಮಂಡಿಸಿದ್ದು, ಇದು ರಾಜ್ಯದಲ್ಲಿ ದಾಖಲೆಯಾಗಿದೆ. ಇನ್ನೂ ಎರಡು ಬಜೆಟ್‌ಗಳನ್ನು ಮಂಡಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆದರೆ ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುವುದಾಗಿ ಹೇಳಿದ ಅವರು, ರಾಜ್ಯದ ಸಾಲದ ಬಗ್ಗೆ ಟೀಕಾಕಾರರಿಗೆ ಪ್ರಧಾನಿ ಮೋದಿ ಅವರ ಸಾಲದ ಕುರಿತು ಪ್ರಶ್ನಿಸಿದ್ದಾರೆ.

ಮೈಸೂರು, ಮಾರ್ಚ್ 7: ಬಜೆಟ್ ಮಂಡನೆ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್​​​ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ಮತ್ತೆ ಮುನ್ನೆಲೆಗೆ ಬರಲಿದೆಯಾ? ಸಿಎಂ ಸಿದ್ದರಾಮಯ್ಯ ನೀಡಿರುವ ಶಾಕಿಂಗ್ ಹೇಳಿಕೆ ಹೀಗೊಂದು ಪ್ರಶ್ನೆ ಹುಟ್ಟಿಕೊಳ್ಳಲು ಕಾರಣವಾಗಿದೆ. ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ಅನ್ನು ಮಾರ್ಚ್ 7 ರಂದು ಮಂಡಿಸಿದ್ದಾರೆ. ಬಳಿಕ ಮಾರ್ಚ್ 7 ರಂದು ಮೈಸೂರಿಗೆ ಭೇಟಿ ನೀಡಿದ್ದು, ಇದೇ ವೇಳೆ ಪತ್ರಕರ್ತರು ಅವರ ಬಳಿ, ‘ಇನ್ನೆರಡು ಬಜೆಟ್ ಅನ್ನೂ ನೀವೇ ಮಂಡಿಸಲಿದ್ದೀರಾ’ ಎಂದು ಪ್ರಶ್ನಿಸಿದ್ದಾರೆ. ಇದಕ್ಕುತ್ತರಿಸಿದ ಸಿದ್ದರಾಮಯ್ಯ, ಅದು ಹೈಕಮಾಂಡ್‌ನ ಅನುಮತಿಯ ಮೇಲೆ ಅವಲಂಬಿತವಾಗಿರುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ಹೈಕಮಾಂಡ್ ಏನು ತೀರ್ಮಾನ ಮಾಡಿದರೂ ಅದಕ್ಕೆ ತಾನು ಬದ್ಧನಾಗಿರುವುದಾಗಿ ಸಿದ್ರಾಮಯ್ಯ ಹೇಳಿದ್ದಾರೆ. ಹೈಕಮಾಂಡ್ ಬಿಟ್ಟುಬಿಡು ಎಂದರೆ ಬಿಡುತ್ತೀನಿ ಎಂದೂ ಹೇಳಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಡುವ ಮಾತುಗಳನ್ನಾಡಿದರಾ ಎಂಬ ಪ್ರಶ್ನೆ ಮೂಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More