ರಾಹುಲ್​ ಗಾಂಧಿ ಕೈನಲ್ಲಿ ಡಿ.ಕೆ.ಶಿವಕುಮಾರ್​ ಭವಿಷ್ಯ? ಸಿಎಂ ಗಾದಿಗೆ ಇನ್ನೊಂದೇ ಮೆಟ್ಟಿಲು?

Edited By:

Updated on: Feb 12, 2026 | 12:40 PM

ಕರ್ನಾಟಕ ಮುಖ್ಯಮಂತ್ರಿ ಸ್ಥಾನ ಸಂಬಂಧ ಡಿ.ಕೆ. ಶಿವಕುಮಾರ್ ಮತ್ತು ರಾಹುಲ್ ಗಾಂಧಿ ನಡುವೆ ಮಹತ್ವದ ಚರ್ಚೆ ನಡೆದಿದೆ. ಸೋನಿಯಾ ಗಾಂಧಿ ಅವರ ಬೆಂಬಲ ಡಿಕೆಶಿಗಿರುವಾಗ, ರಾಹುಲ್ ಗಾಂಧಿ ಅವರ ಮನವೊಲಿಸುವುದು ಸವಾಲಾಗಿದೆ. ಮುಂಬರುವ 2028 ಮತ್ತು 2029ರ ಚುನಾವಣೆಗಳ ದೃಷ್ಟಿಯಿಂದ ನಾಯಕತ್ವ ಬದಲಾವಣೆ ಕುರಿತು ಪ್ರಸ್ತಾಪ ನಡೆದಿದೆ ಎನ್ನಲಾಗಿದೆ.

ದೆಹಲಿ, ಫೆಬ್ರವರಿ 12: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಡಿ.ಕೆ. ಶಿವಕುಮಾರ್ ಮತ್ತು ರಾಹುಲ್ ಗಾಂಧಿ ನಡುವೆ ಮಹತ್ವದ ಭೇಟಿ ನಡೆದಿದೆ. ಟಿವಿ9ಗೆ ಲಭ್ಯವಾದ ಮಾಹಿತಿಯ ಪ್ರಕಾರ, ರಾಹುಲ್ ಗಾಂಧಿ  ನಿರ್ಧಾರ ಡಿ..ಕೆ ಶಿವಕುಮಾರ್ ಅವರ ಮುಖ್ಯಮಂತ್ರಿ ಭವಿಷ್ಯಕ್ಕೆ ನಿರ್ಣಾಯಕವಾಗಿದೆ. ಸೋನಿಯಾ ಗಾಂಧಿ ಅವರು ಡಿ.ಕೆ. ಶಿವಕುಮಾರ್ ಪರವಾಗಿದ್ದಾರೆ. ಆದರೆ, ರಾಹುಲ್ ಗಾಂಧಿ ಅವರನ್ನು ಒಪ್ಪಿಸುವುದೇ ಈಗ ಡಿಕೆಶಿಗೆ ಸವಾಲಾಗಿದೆ. ಹೀಗಾಗಿ ಮುಂದಿನ 2028ರ ವಿಧಾನಸಭಾ ಚುನಾವಣೆ ಮತ್ತು 2029ರ ಲೋಕಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ನಾಯಕತ್ವ ಬದಲಾವಣೆಯ ಅಗತ್ಯವನ್ನು ರಾಹುಲ್ ಗಾಂಧಿಗೆ ಮನವರಿಕೆ ಮಾಡಲು ಡಿ.ಕೆ. ಶಿವಕುಮಾರ್ ಪ್ರಯತ್ನಿಸಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Feb 12, 2026 12:36 PM
Follow Us
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More