ಮಿನಿ ಕುರುಕ್ಷೇತ್ರ: ಸುರ್ಜೇವಾಲ ಜೊತೆಗಿನ ಹೈವೋಲ್ಟೇಜ್​​​ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು

Edited By:

Updated on: Mar 20, 2026 | 11:01 PM

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಂಬರುವ ಉಪಚುನಾವಣೆಗಳ ಅಭ್ಯರ್ಥಿ ಆಯ್ಕೆ ಕುರಿತು ಪಕ್ಷದಲ್ಲಿ ಒಮ್ಮತ ಮೂಡಿದೆ ಎಂದು ಹೇಳಿದ್ದಾರೆ. ಎಲ್ಲರ ಅಭಿಪ್ರಾಯ ಸಂಗ್ರಹಿಸಿ, ಅಭ್ಯರ್ಥಿಗಳ ಪಟ್ಟಿಯನ್ನು ದೆಹಲಿಗೆ ಕಳುಹಿಸಲಾಗುವುದು. ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ಎಲ್ಲ ನಾಯಕರು ಪಕ್ಷದ ನಿರ್ಧಾರಕ್ಕೆ ಬದ್ಧರಾಗಿರುವುದಾಗಿ ತಿಳಿಸಿದ್ದಾರೆ.

ಬೆಂಗಳೂರು, ಮಾರ್ಚ್​ 20: ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗೆ ಕೌಂಟ್​ಡೌನ್ ಶುರುವಾಗಿದ್ದು, ಈಗಾಗಲೇ ಅಖಾಡ ರಂಗೇರಿದೆ. ಟಿಕೆಟ್ ಘೋಷಣೆಗೂ ಮುನ್ನವೇ ಆಕಾಂಕ್ಷಿಗಳು ನಾಮಪತ್ರ ಸಲ್ಲಿಸಿರೋದು ಕಾಂಗ್ರೆಸ್​ಗೆ ತಲೆನೋವಾಗಿದೆ. ಬಿಕ್ಕಟ್ಟು ಬಗೆಹರಿಸಲು ರಾಜ್ಯ ಉಸ್ತುವಾರಿ ಸಚಿವ ರಣದೀಪ್ ಸಿಂಗ್ ಸುರ್ಜೇವಾಲ ಅಖಾಡಕ್ಕಿಳಿದಿದ್ದು, ಸಿಎಂ, ಡಿಸಿಎಂ ಜೊತೆ ಸಭೆ ಮಾಡಿದ್ದಾರೆ. ಸದ್ಯ ಸಭೆ ಬಳಿಕ ಮಾಧ್ಯಮದವರೊಂದಿಗೆ ಡಿಸಿಎಂ ಡಿಕೆ ಶಿವಕುಮಾರ್​ ಮಾತನಾಡಿದ್ದು, ನಾನು, ಸಿಎಂ, ರಾಜ್ಯ ಉಸ್ತುವಾರಿ ಸಭೆ ಮಾಡಿದ್ದೇವೆ. ಸಭೆಯಲ್ಲಿ ಎಲ್ಲ ಮುಖಂಡರ ಅಭಿಪ್ರಾಯ ಹೇಳಿದ್ದೇವೆ. ಒಮ್ಮತದ ನಿರ್ಧಾರ ಆಗಿದೆ. ನಮ್ಮ ಅಭಿಪ್ರಾಯವನ್ನು ಹೈಕಮಾಂಡ್​ಗೆ ಕಳಿಸುತ್ತೇವೆ. S.S.ಮಲ್ಲಿಕಾರ್ಜುನ್ ಜೊತೆಗೆ ಕೂಡ ಮಾತನಾಡಿದೆ. ಒಳ್ಳೇ ದಿನ ಅನ್ನೋ ಕಾರಣಕ್ಕೆ ನಾಮಪತ್ರ ಸಲ್ಲಿಸಿದ್ದಾನೆ ಎಂದಿದ್ದಾರೆ. ಅಗತ್ಯಬಿದ್ರೆ ಹಿಂಪಡೆಯುತ್ತೇನೆ ಅಂತಾನೂ ಹೇಳಿದ್ದಾರೆ. ಅಲ್ಪಸಂಖ್ಯಾತರು ಪಕ್ಷ ಹೇಳಿದ್ದು ಮಾಡುತ್ತೇವೆ ಅಂದಿದ್ದಾರೆ. ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ ಅಂತ ಎಲ್ಲಾ ಹೇಳಿದ್ದಾರೆ. ಶೀಘ್ರವೇ ಅಭ್ಯರ್ಥಿ ಆಯ್ಕೆ ಮಾಡಿ ಘೋಷಿಸುತ್ತೇವೆ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಅನಿಲ್​ ಕಲ್ಕೆರೆ

ಅನಿಲ್ ಕಲ್ಕೆರೆ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 11 ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಸೆಂಟ್ರಲ್ ಕಾಲೇಜು) ದಲ್ಲಿ Msc (ಮಾಸ್ ಕಮ್ಯುನಿಕೇಷನ್) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಸೃಜನಶೀಲ ಬರವಣಿಗೆ ಜೊತೆಗೆ ವಿಧಾನಸೌಧದ ಆಡಳಿತಾತ್ಮಕ ಸುದ್ದಿಗಳೂ ಸೇರಿದಂತೆ, ರಾಜಕೀಯ ಪಕ್ಷಗಳು ಹಾಗೂ ರಾಜಕೀಯದ ಪ್ರಸಕ್ತ ವಿದ್ಯಮಾನಗಳನ್ನ ಒಳಗೊಂಡಂತಹ ಸುದ್ದಿಗಳತ್ತ ಗಮನ ಹರಿಸುತ್ತಿದ್ದಾರೆ. ಜೊತೆಗೆ ಪ್ರಜಾಪ್ರಭುತ್ವ ನಾಲ್ಕನೇ ಆಧಾರ ಸ್ತಂಭವಾಗಿ ಸಾಮಾನ್ಯಜನರ ಪರ ಧ್ವನಿಯಾಗಿ ಸರ್ಕಾರಕ್ಕೆ ಸಮಸ್ಯೆ ಮುಟ್ಟಿಸುವ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದಾರೆ.

Read More