SIR ಸಭೆಗೆ ಗೈರಾದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರಿಗೆ ಕೊಕ್: ‘ಕೈ’ಯಲ್ಲಿ ಭಾರಿ ಸಂಚಲನ

Edited By:

Updated on: May 25, 2026 | 6:33 PM

ಕಾಂಗ್ರೆಸ್ ಪಕ್ಷವು ಎಸ್ಐಆರ್ ಕುರಿತು ಕರೆದಿದ್ದ ಪ್ರಮುಖ ಸಭೆಗೆ ನೂರಕ್ಕೂ ಹೆಚ್ಚು ಉಪಾಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಗೈರಾಗಿದ್ದಾರೆ. ಈ ಬಗ್ಗೆ ಪಕ್ಷದ ರಾಜ್ಯ ಉಸ್ತುವಾರ ಸುರ್ಜೇವಾಲ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಗೈರಾದವರನ್ನು ಹುದ್ದೆಗಳಿಂದ ತೆಗೆದುಹಾಕಲು ಸೂಚನೆ ನೀಡಿದ್ದಾರೆ. ಎಸ್ಐಆರ್ ಪ್ರಕ್ರಿಯೆಯ ಗಂಭೀರತೆಯನ್ನು ಅರ್ಥಮಾಡಿಕೊಳ್ಳದವರ ವಿರುದ್ಧ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ.

ಬೆಂಗಳೂರು, ಮೇ 25: ಎಸ್ಐಆರ್ ಕುರಿತು ಕರೆದಿದ್ದ ಪ್ರಮುಖ ಸಭೆಗೆ ನೂರಕ್ಕೂ ಹೆಚ್ಚು ಉಪಾಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಗೈರಾಗಿದ್ದ ಕಾರಣ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ. ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸೂಚನೆಯ ಮೇರೆಗೆ ಈ ಸಭೆಯನ್ನು ಆಯೋಜಿಸಲಾಗಿತ್ತು. ದೇವನಹಳ್ಳಿ ಹೊರವಲಯದ ಖಾಸಗಿ ಹೋಟೆಲ್‌ನಲ್ಲಿ ಕೆಪಿಸಿಸಿ ಈ ಸಭೆ ನಡೆಸಿತ್ತು. ಪಕ್ಷದ ನಾಯಕರು ಎಸ್ಐಆರ್ ಪ್ರಕ್ರಿಯೆಯ ಪ್ರಾಮುಖ್ಯತೆಯನ್ನು ತಿಳಿಸಲು ಈ ಸಭೆ ಆಯೋಜಿಸಿದ್ದರು. ಆದರೆ, ನೂರಕ್ಕೂ ಹೆಚ್ಚು ಪದಾಧಿಕಾರಿಗಳು ಗೈರಾಗಿದ್ದರಿಂದ ಸುರ್ಜೇವಾಲ ಅವರು ತೀವ್ರ ಅಸಮಾಧಾನಗೊಂಡಿದ್ದಾರೆ. ಎಸ್ಐಆರ್ ಸಭೆಯ ಗಂಭೀರತೆಯನ್ನು ಅರ್ಥಮಾಡಿಕೊಳ್ಳದವರು ಪಕ್ಷಕ್ಕೆ ಏನು ಕೆಲಸ ಮಾಡುತ್ತಾರೆ ಎಂದು ಪ್ರಶ್ನಿಸಿದ ಸುರ್ಜೇವಾಲ, ಗೈರಾದವರನ್ನು ಪಕ್ಷದ ಹುದ್ದೆಗಳಿಂದ ತೆಗೆದುಹಾಕಲು ಆದೇಶಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us