ಸತೀಶ್ ಜಾರಕಿಹೊಳಿ, ಮಹದೇವಪ್ಪ ಜೊತೆಗಿನ ರಹಸ್ಯ ಸಭೆಯ ಮಾಹಿತಿ ಬಿಚ್ಚಿಟ್ಟ ಜಿ ಪರಮೇಶ್ವರ

Edited By:

Updated on: Oct 09, 2024 | 9:45 AM

ಮುಡಾ ಹಗರಣ, ಸಿಎಂ ಬದಲಾವಣೆ ಚರ್ಚೆ, ದಲಿತ ಸಿಎಂ ಕೂಗು ಈ ಎಲ್ಲ ಬೆಳವಣಿಗೆಗಳ ಮಧ್ಯೆ ಮಂಗಳವಾರ ರಾತ್ರಿ ಮೈಸೂರಿನಲ್ಲಿ ಸಚಿವ ಮಹದೇವಪ್ಪ ನಿವಾಸದಲ್ಲಿ ಗೃಹ ಸಚಿವ ಜಿ ಪರಮೇಶ್ವರ, ಸತೀಶ್ ಜಾರಕಿಹೊಳಿ ಡಿನ್ನರ್ ಮಾಡಿದ್ದಾರೆ. ಡಿನ್ನರ್ ಮೀಟಿಂಗ್ ರಹಸ್ಯವೇನು ಎಂಬುದನ್ನು ಪರಮೇಶ್ವರ್ ಅವರು ಮಾತನಾಡಿದ್ದಾರೆ, ಇಲ್ಲಿದೆ ನೋಡಿ.

ಮೈಸೂರು, ಅಕ್ಟೋಬರ್ 9: ಸಚಿವ ಮಹದೇವಪ್ಪ ನಿವಾಸದಲ್ಲಿ ಕಾಂಗ್ರೆಸ್​​ ದಲಿತ ನಾಯಕರ ಡಿನ್ನರ್​ ಮೀಟಿಂಗ್​ ವಿಚಾರವಾಗಿ ಮೈಸೂರಿನಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಮಹದೇವಪ್ಪ ಮನೆಯಲ್ಲಿ ಡಿನ್ನರ್ ಅರೇಂಜ್​ ಅಗಿತ್ತು. ಊಟಕ್ಕೆ ಹೋಗಿದ್ದೆವು ಅಷ್ಟೆ. ಮೈಸೂರಿನ ಆತಿಥ್ಯ ಬಿಡುವುದಕ್ಕೆ ಆಗುತ್ತದೆಯೇ? ಡಿನ್ನರ್​ಗೆ ಬೇರೆ ಯಾವುದೇ ಅರ್ಥ ಕಲ್ಪಿಸುವ ಅಗತ್ಯ ಇಲ್ಲ. ನಾನು, ಸಚಿವರಾದ ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಶಾಸಕ ಎ.ಆರ್.ಕೃಷ್ಣಮೂರ್ತಿ ರಾತ್ರಿ ಡಿನ್ನರ್ ಮಾಡಿದ್ದೆವು. ಈ ವೇಳೆ ಯಾವುದೇ ರಾಜಕೀಯ ವಿಚಾರಗಳು ಚರ್ಚೆ ನಡೆದಿಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published on: Oct 09, 2024 08:50 AM
Loading...
Unable to load recommendations.
Follow Us
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More