AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರೋರಾತ್ರಿ ಸದಾಶಿವನಗರದ ಡಿಕೆ ಶಿವಕುಮಾರ್ ನಿವಾಸದಲ್ಲಿ ಮಹತ್ವದ ಬೆಳವಣಿಗೆ!

ರಾತ್ರೋರಾತ್ರಿ ಸದಾಶಿವನಗರದ ಡಿಕೆ ಶಿವಕುಮಾರ್ ನಿವಾಸದಲ್ಲಿ ಮಹತ್ವದ ಬೆಳವಣಿಗೆ!

Ganapathi Sharma
|

Updated on:Nov 22, 2025 | 7:15 AM

Share

ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಸಿಎಂ ಡಿಕೆ ಶಿವಕುಮಾರ್ ನಿವಾಸದಲ್ಲಿ ರಾತ್ರೋರಾತ್ರಿ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆದವು. ಮುಖ್ಯಮಂತ್ರಿ ಸ್ಥಾನ ಬದಲಾವಣೆಗೆ ಸಂಬಂಧಿಸಿದಂತೆ ನಡೆಯುತ್ತಿದ್ದ ಚರ್ಚೆಗಳ ಮಧ್ಯೆ ಈ ಬೆಳವಣಿಗೆಗಳು ಕುತೂಹಲ ಮೂಡಿಸಿವೆ. ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರು, ಡಿಕೆಶಿ ಬೆಂಬಲಿಗರು ನಿವಾಸದಲ್ಲಿ ಸಭೆ ಸೇರಿದ್ದರು ಎನ್ನಲಾಗಿದೆ.

ಬೆಂಗಳೂರು, ನವೆಂಬರ್ 22: ಒಂದೆಡೆ ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗುತ್ತಿರುವ ಸಂದರ್ಭದಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಅವರ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಮಹತ್ವದ ಕೆಲವು ಬೆಳವಣಿಗೆ ನಡೆದಿವೆ. ಜೇನುಕಲ್ಲು ಸಿದ್ದೇಶ್ವರ ಸ್ವಾಮಿ ಉತ್ಸವ ಮೂರ್ತಿಯ ಪಲ್ಲಕ್ಕಿ ಶುಕ್ರವಾರ ರಾತ್ರಿ ಡಿಕೆಶಿ ನಿವಾಸಕ್ಕೆ ಆಗಮಿಸಿದ್ದು, ವಿಶೇಷ ಪೂಜೆ ಸಲ್ಲಿಸಲಾಗಿದೆ. ಇದನ್ನೇ ನೆಪವಾಗಿಟ್ಟುಕೊಂಡು ಸಿಪಿ ಯೋಗೇಶ್ವರ್ ಸೇರಿದಂತೆ ಪ್ರಕಾಶ್ ಕೋಳಿವಾಡ್ ಹಾಗೂ ಯಾಸೀರ್ ಪಠಾಣ್, ಶ್ರೀನಿವಾಸ್ ಮಾನೆ, ಎಂಎಲ್​ಸಿ ದಿನೇಶ್ ಗೂಳಿಗೌಡ, ಮಾಜಿ ಸಂಸದ ಶಿವರಾಮೇಗೌಡ, ಕಾಂಗ್ರೆಸ್​​ ಮುಖಂಡ ಆನಂದಗಡ್ಡದೇವರ ಮಠ ಡಿಕೆಶಿ ನಿವಾಸಕ್ಕೆ ಆಗಮಿಸಿದ್ದಾರೆ. ರಾತ್ರಿ‌ 9.30ರ ಸುಮಾರಿಗೆ ಪಲ್ಲಕ್ಕಿ ವಾಹನ ಆಗಮಿಸಿದ್ದು, ಐವರು ಪೂಜಾರಿಗಳಿಂದ ಸುಮಾರು 1 ಗಂಟೆಗೂ ಹೆಚ್ಚು ಕಾಲ ವಿಶೇಷ ಪೂಜೆ ನೆರವೇರಿದೆ. ಇದೇ ಸಂದರ್ಭದಲ್ಲಿ ಆಪ್ತ ಶಾಸಕರ ಜತೆ ಡಿಕೆ ಶಿವಕುಮಾರ್ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ವಿವರಗಳಿಗೆ ಕ್ಲಿಕ್ ಮಾಡಿ: ಅಧಿಕಾರ ಹಂಚಿಕೆ ಜಟಾಪಟಿ: ಸಿದ್ದರಾಮಯ್ಯ, ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಬುಲಾವ್, ಎಲ್ಲರ ಚಿತ್ತ ಎಐಸಿಸಿ ಅಧ್ಯಕ್ಷರತ್ತ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Nov 22, 2025 06:43 AM