ಲೋಕಸಭಾ ಚುನಾವಣೆಗೆ ಭರ್ಜರಿ ಆಪರೇಷನ್: ಶೆಟ್ಟರ್-ಸವದಿ ನೇತೃತ್ವದಲ್ಲಿ ಬಿಜೆಪಿ ಲಿಂಗಾಯತ ನಾಯಕರಿಗೆ ಗಾಳ

Edited By:

Updated on: Aug 20, 2023 | 1:52 PM

ಲೋಕಸಭೆ ಚುನಾವಣೆಗೆ ವೋಟ್​ ಶೇರ್ ಹೆಚ್ಚಳಕ್ಕೆ ಕಾಂಗ್ರೆಸ್​ ಮಾಸ್ಟರ್ ಪ್ಲ್ಯಾನ್ ಮಾಡುತ್ತಿದ್ದು, ಇದಕ್ಕಾಗಿಯೇ ಉತ್ತರ ಕರ್ನಾಟಕ ಭಾಗದಲ್ಲಿ ಲಿಂಗಾಯತ ಮತಗಳ ಕ್ರೋಢೀಕರಣಕ್ಕೆ ತಂತ್ರಗಾರಿಕೆ ನಡೆಸಿದೆ. ಜಗದೀಶ್ ಶೆಟ್ಟರ್ ಹಾಗೂ ಲಕ್ಣ್ಮಣ ಸವದಿ ಜೊತೆಗೆ ಆತ್ಮೀಯರಾಗಿರುವ ಮಾಜಿ ಶಾಸಕರನ್ನು ಸಂಪರ್ಕಿಸುತ್ತಿರುವ ಮಾಹಿತಿ ಸಿಕ್ಕಿದೆ.

ಬೆಂಗಳೂರು, (ಆಗಸ್ಟ್ 20): ಲೋಕಸಭೆ ಚುನಾವಣೆಗೆ ವೋಟ್​ ಶೇರ್ ಹೆಚ್ಚಳಕ್ಕೆ ಕಾಂಗ್ರೆಸ್​ ಮಾಸ್ಟರ್ ಪ್ಲ್ಯಾನ್ ಮಾಡುತ್ತಿದ್ದು, ಇದಕ್ಕಾಗಿಯೇ ಉತ್ತರ ಕರ್ನಾಟಕ ಭಾಗದಲ್ಲಿ ಲಿಂಗಾಯತ ಮತಗಳ ಕ್ರೋಢೀಕರಣಕ್ಕೆ ತಂತ್ರಗಾರಿಕೆ ನಡೆಸಿದೆ. ಹೀಗಾಗಿ ಉತ್ತರ ಕರ್ನಾಟಕ ಭಾಗದ ಬಿಜೆಪಿ ನಾಯಕರಿಗೆ ಗಾಳ ಹಾಕಿದೆ. ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಕೆಲವು ಬಿಜೆಪಿ ನಾಯಕರನ್ನು ಕಾಂಗ್ರೆಸ್ ಕಡೆ ಸೆಳೆಯುವ ಚರ್ಚೆ ನಡೆದಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

20-25 ಹಿರಿಯ ಬಿಜೆಪಿ ನಾಯಕರು, ಮಾಜಿ ಶಾಸಕರನ್ನು ಸೆಳೆಯಲು ಕಾಂಗ್ರೆಸ್ ಕಸರತ್ತು ನಡೆಸಿದೆ. ಜಗದೀಶ್ ಶೆಟ್ಟರ್ ಹಾಗೂ ಲಕ್ಣ್ಮಣ ಸವದಿ ಜೊತೆಗೆ ಆತ್ಮೀಯರಾಗಿರುವ ಮಾಜಿ ಶಾಸಕರನ್ನು ಸಂಪರ್ಕಿಸುತ್ತಿರುವ ಮಾಹಿತಿ ಸಿಕ್ಕಿದ್ದು, ಶ‌ಂಕರ್ ಪಾಟೀಲ್ ಮುನೇನಕೊಪ್ಪ ಸೇರಿದಂತೆ ಹಲವರ ಜೊತೆಗೆ ಈಗಾಗಲೇ ಚರ್ಚೆಯಾಗಿದೆ ಎಂದು ತಿಳಿದುಬಂದಿದೆ. ಅಕಸ್ಮಾತ್ ಕಾಂಗ್ರೆಸ್ ಈ ಪ್ರಯತ್ನ ಫಲ ಕೊಟ್ಟರೆ ಲೋಕಸಭೆ ಚುನಾವಣೆ ವೇಳೆ ಬಿಜೆಪಿಗೆ ಮತ್ತಷ್ಟು ಸಮಸ್ಯೆ ಉಂಟಾಗಬಹುದು.

ಇನ್ನಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published on: Aug 20, 2023 01:50 PM
Follow Us
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More