Congress Sadhana Samavesha Live: ತುಮಕೂರಿನಲ್ಲಿ ಸರ್ಕಾರದಿಂದ ಸಾಧನಾ ಸಮಾವೇಶ ನೇರಪ್ರಸಾರ

Updated on: May 19, 2026 | 11:23 AM

ಇಂದು ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ 3ನೇ ವರ್ಷದ ಭವ್ಯ ಸಾಧನಾ ಸಮಾವೇಶ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಡಾ. ಜಿ. ಪರಮೇಶ್ವರ್ ನೇತೃತ್ವದಲ್ಲಿ ಕಾರ್ಯಕ್ರಮ ನೆರವೇರಲಿದೆ. ಈ ಮಹಾವೇದಿಕೆಯಲ್ಲಿ ಜಿಲ್ಲೆಯ 1.52 ಲಕ್ಷ ಫಲಾನುಭವಿಗಳಿಗೆ ಇ-ಖಾತಾ, ಹಕ್ಕುಪತ್ರ ಹಾಗೂ ನಿವೇಶನ ಪತ್ರಗಳು ಸೇರಿದಂತೆ ವಿವಿಧ ಸವಲತ್ತುಗಳನ್ನು ವಿತರಿಸಲಾಗುತ್ತಿದೆ.

ತುಮಕೂರು, ಮೇ 19: ಇಂದು ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ 3ನೇ ವರ್ಷದ ಭವ್ಯ ಸಾಧನಾ ಸಮಾವೇಶ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಡಾ. ಜಿ. ಪರಮೇಶ್ವರ್ ನೇತೃತ್ವದಲ್ಲಿ ಕಾರ್ಯಕ್ರಮ ನೆರವೇರಲಿದೆ.

ಈ ಮಹಾವೇದಿಕೆಯಲ್ಲಿ ಜಿಲ್ಲೆಯ 1.52 ಲಕ್ಷ ಫಲಾನುಭವಿಗಳಿಗೆ ಇ-ಖಾತಾ, ಹಕ್ಕುಪತ್ರ ಹಾಗೂ ನಿವೇಶನ ಪತ್ರಗಳು ಸೇರಿದಂತೆ ವಿವಿಧ ಸವಲತ್ತುಗಳನ್ನು ವಿತರಿಸಲಾಗುತ್ತಿದೆ. ಜೊತೆಗೆ, 600 ಅಂಗನವಾಡಿ ಕಾರ್ಯಕರ್ತೆಯರಿಗೆ ನೇಮಕಾತಿ ಆದೇಶ ಪತ್ರ ಹಾಗೂ 687 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಲಿದೆ. ಸುಮಾರು 2 ಲಕ್ಷ ಜನ ಸೇರುವ ನಿರೀಕ್ಷೆಯಿದ್ದು, 3 ಸಾವಿರಕ್ಕೂ ಹೆಚ್ಚು ಬಸ್‌ಗಳು ಹಾಗೂ ಎಲ್ಲರಿಗೂ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮದ ನೇರಪ್ರಸಾರ ಇಲ್ಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More