ಆಪರೇಷನ್ ಸಿಂಧೂರ್​ ಕಾರ್ಯಾಚರಣೆ ಬೆಂಬಲಿಸಿ ಕರ್ನಾಟಕ ಕಾಂಗ್ರೆಸ್​ ತಿರಂಗಾ ಯಾತ್ರೆ: ಸಿಎಂ, ಡಿಸಿಎಂ ಭಾಗಿ

Updated on: May 09, 2025 | 2:08 PM

ಪೆಹಲ್ಗಾಮ್‌ನ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್‌ಗೆ ಬೆಂಬಲ ವ್ಯಕ್ತಪಡಿಸಿ ಕರ್ನಾಟಕದ ಕಾಂಗ್ರೆಸ್ ಸರ್ಕಾರ ತಿರಂಗಾ ಯಾತ್ರೆ ಆಯೋಜಿಸಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕೆ.ಆರ್. ಸರ್ಕಲ್‌ನಿಂದ ಚಿನ್ನಸ್ವಾಮಿ ಕ್ರೀಡಾಂಗಣದವರೆಗೆ ನಡೆದ ಈ ಯಾತ್ರೆಯಲ್ಲಿ ಪಕ್ಷಾತೀತವಾಗಿ ಅನೇಕರು ಭಾಗವಹಿಸಿದ್ದರು.

ಬೆಂಗಳೂರು, ಮೇ 09: ಪೆಹಲ್ಗಾಮ್ ಉಗ್ರರ ದಾಳಿಗೆ ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ್ (Operation Sindoor) ಮೂಲಕ ಪ್ರತ್ಯುತ್ತರ ನೀಡಲಾಗಿದೆ. ಹಾಗಾಗಿ ಭಾರತೀಯ ಸೇನೆಗೆ ಬೆಂಬಲ ಸೂಚಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ತಿರಂಗಾ ಯಾತ್ರೆ ಮಾಡಲಾಯಿತು. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕೆಆರ್ ಸರ್ಕಲ್ ನಿಂದ ಚಿನ್ನಸ್ವಾಮಿ ಕ್ರೀಡಾಂಗಣದ ಸರ್ಕಲ್​ವರೆಗೆ ತಿರಂಗಾ ಯಾತ್ರೆ ಮಾಡಲಾಗಿದ್ದು, ಪಕ್ಷಾತೀತವಾಗಿ ರಾಜಕೀಯ ನಾಯಕರು, ಸೆಲೆಬ್ರಿಟಿಗಳು ಮತ್ತು ಸಾರ್ವಜನಿಕರು ಯಾತ್ರೆಯಲ್ಲಿ ಭಾಗಿಯಾಗಿದ್ದರು. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: May 09, 2025 02:03 PM
Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More