ಸಿದ್ದರಾಮಯ್ಯ ಆಪ್ತರಿಂದ ಸಭೆ, ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ: ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು

Edited By:

Updated on: Apr 24, 2026 | 11:38 AM

ದಾವಣಗೆರೆ ದಂಗಲ್ ಬಳಿಕ ಕರ್ನಾಟಕ ಕಾಂಗ್ರೆಸ್‌ನಲ್ಲಿ ಆಂತರಿಕ ಅಸಮಾಧಾನ ಭುಗಿಲೆದ್ದಿದೆ. ಏಕಪಕ್ಷೀಯ ನಿರ್ಧಾರಗಳು ಮತ್ತು ಮುಖ್ಯಮಂತ್ರಿಗಳ ಮೌನದ ಬಗ್ಗೆ ಸಿಎಂ ಆಪ್ತ ಸಚಿವರು ಸಭೆ ನಡೆಸಿ ಚರ್ಚಿಸಿದ್ದಾರೆ. ಈ ನಡುವೆ ಡಿಕೆ ಸಹೋದರರು ದೆಹಲಿಗೆ ತೆರಳಿದ್ದು ತೀವ್ರ ಕುತೂಹಲ ಮೂಡಿಸಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಸಿಎಂ ಆಪ್ತರ ಸಭೆ ಬಗ್ಗೆ ಮಾಹಿತಿ ಇಲ್ಲ ಎಂದಿದ್ದಾರೆ.

ಬೆಂಗಳೂರು, ಏಪ್ರಿಲ್ 24: ದಾವಣಗೆರೆ ಉಪಚುನಾವಣೆ ಬೆಳವಣಿಗಗಳ ಬಳಿಕ ಕರ್ನಾಟಕ ಕಾಂಗ್ರೆಸ್‌ನಲ್ಲಿ ಆಂತರಿಕ ಅಸಮಾಧಾನ ಮತ್ತೆ ಭುಗಿಲೆದ್ದಿದೆ. ಪಕ್ಷದಲ್ಲಿ ನಡೆಯುತ್ತಿರುವ ಏಕಪಕ್ಷೀಯ ನಿರ್ಧಾರಗಳು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೌನದ ಬಗ್ಗೆ ಅವರ ಆಪ್ತ ಸಚಿವರು ಸಭೆ ನಡೆಸಿ ಚರ್ಚೆ ಮಾಡಿದ್ದಾರೆ. ಬೆಂಗಳೂರಿನ ಕನ್ನಿಂಗ್ಹ್ಯಾಮ್ ರಸ್ತೆಯ ಖಾಸಗಿ ಕಟ್ಟಡದಲ್ಲಿ ಸಚಿವರಾದ ಭೈರತಿ ಸುರೇಶ್, ಡಾ. ಜಿ. ಪರಮೇಶ್ವರ, ಮಹದೇವಪ್ಪ, ಸತೀಶ್ ಜಾರಕಿಹೊಳಿ, ಜಮೀರ್ ಅಹಮದ್ ಮತ್ತು ದಿನೇಶ್ ಗುಂಡುರಾವ್ ಸಭೆಯಲ್ಲಿ ಪಾಲ್ಗೊಂಡಿದ್ದರು. ಈ ಸಭೆಯಲ್ಲಿ ಪಕ್ಷದ ಹಿರಿಯ ನಾಯಕರ ಅಸ್ತಿತ್ವಕ್ಕೆ ಕುತ್ತು ಬರುವ ಸಾಧ್ಯತೆ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಲಾಯಿತು. 2028ರ ಚುನಾವಣೆಯಲ್ಲಿ ಸಮುದಾಯಗಳು ದೂರ ಸರಿಯುವ ಆತಂಕವೂ ಚರ್ಚೆಗೆ ಬಂದಿದೆ. ಈ ಬೆಳವಣಿಗೆಗಳ ನಡುವೆ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ದೆಹಲಿಗೆ ತೆರಳಿದ್ದು ತೀವ್ರ ಚರ್ಚೆಗೆ ಕಾರಣವಾಗಿದೆ. ಡಿಕೆ ಶಿವಕುಮಾರ್ ಅವರು ಸಿಎಂ ಆಪ್ತರ ಸಭೆ ಬಗ್ಗೆ ಮಾಹಿತಿ ಇಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ಕಾಂಗ್ರೆಸ್‌ನ ಈ ಆಂತರಿಕ ಬೆಳವಣಿಗೆಗಳಿಗೆ ವಿಪಕ್ಷ ನಾಯಕರು ‘ಹುಡುಗಾಟಿಕೆಯ ರಾಜಕಾರಣ’ ಎಂದು ಟೀಕಿಸಿದ್ದು, ಮೂರು-ನಾಲ್ಕು ತಿಂಗಳಲ್ಲಿ ಸ್ಪೋಟಕ ಬೆಳವಣಿಗೆಗಳು ಆಗಲಿವೆ. ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಬದಲಾವಣೆ ಆಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಉಪಚುನಾವಣೆಗೂ ಮುನ್ನ ಕೊಂಚ ಸದ್ದಡಗಿದ್ದ ಸಿಎಂ ಕುರ್ಚಿ ಚರ್ಚೆ ಇದೀಗ ಮತ್ತೆ ಮುನ್ನೆಲೆಗೆ ಬರುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Apr 24, 2026 09:12 AM
Follow Us
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More