ಪಟ್ಟಕ್ಕೆ ಫೈಟ್​ ನಡುವೆ ಡಿಸಿಎಂ ಡಿ.ಕೆ. ಶಿವಕುಮಾರ್​​ಗೆ ಬಂತು ಹೈಕಮಾಂಡ್​​​ ಸಂದೇಶ

Updated on: Nov 26, 2025 | 1:51 PM

ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವದ ಕುರಿತು ಗೊಂದಲ ತಲೆದೋರಿರುವ ನಡುವೆ ಡಿಸಿಎಂ ಡಿಕೆ ಶಿವಕುಮಾರ್​​ಗೆ ಕಾಂಗ್ರೆಸ್​​ ವರಿಷ್ಠ ರಾಹುಲ್​ ಗಾಂಧಿ ಅವರಿಂದ ಸಂದೇಶ ಬಂದಿದೆ. ಹೈಕಮಾಂಡ್ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಇಬ್ಬರನ್ನೂ ಪಕ್ಷಕ್ಕೆ ಅನಿವಾರ್ಯವೆಂದು ಪರಿಗಣಿಸಿದೆ ಎನ್ನಲಾಗಿದೆ. ಈ ಹಿನ್ನಲೆ ಅಸಮಾಧಾನಗೊಂಡಿರೋ ಡಿಕೆಶಿ ಮನವೊಲಿಕಗೆ ನಾಯಕರು ಮುಂದಾಗಿದ್ದಾರೆ ಎನ್ನಲಾಗಿದೆ.

ಬೆಂಗಳೂರು, ನವೆಂಬರ್​​ 26: ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನಾರಚನೆ ಕುರಿತ ಚರ್ಚೆಗಳು ಜೋರಾಗಿವೆ. ಈ ನಡುವೆ ಡಿಸಿಎಂ ಡಿ.ಕೆ. ಶಿವಕುಮಾರ್ ಹೈಕಮಾಂಡ್‌ನೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ರಾಹುಲ್ ಗಾಂಧಿ ಅವರಿಂದ ಡಿಕೆಶಿಗೆ ‘ದಯವಿಟ್ಟು ಕಾಯಿರಿ, ನಾನು ಕರೆ ಮಾಡುತ್ತೇನೆ’ ಎಂಬ ಸಂದೇಶ ಬಂದಿರೋದು ಭಾರಿ ಕುತೂಹಲ ಮೂಡಿಸಿದೆ. ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅಥವಾ ಡಿ.ಕೆ. ಶಿವಕುಮಾರ್ ಇಬ್ಬರನ್ನೂ ಕಡೆಗಣಿಸುವ ಸ್ಥಿತಿಯಲ್ಲಿಲ್ಲ. ಕರ್ನಾಟಕದಲ್ಲಿ ಪಕ್ಷ ಗಟ್ಟಿಯಾಗಿ ನಿಲ್ಲಬೇಕಾದರೆ ಇಬ್ಬರ ಸಹಭಾಗಿತ್ವ ಅತ್ಯಂತ ಪ್ರಮುಖ ಎಂದು ವರಿಷ್ಠರು ನಂಬಿದ್ದಾರೆ. ಹೀಗಾಗಿ ಡಿ.ಕೆ. ಶಿವಕುಮಾರ್ ಅವರನ್ನು ಸಮಾಧಾನಪಡಿಸುವುದು ರಾಹುಲ್ ಗಾಂಧಿಯವರ ಮೊದಲ ಆದ್ಯತೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.