AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ? ಇಲ್ಲಿದೆ ಇಟ್ರೆಸ್ಟಿಂಗ್ ಮಾಹಿತಿ

ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ? ಇಲ್ಲಿದೆ ಇಟ್ರೆಸ್ಟಿಂಗ್ ಮಾಹಿತಿ

ರಮೇಶ್ ಬಿ. ಜವಳಗೇರಾ
|

Updated on:May 30, 2026 | 4:15 PM

Share

ಸಿದ್ದರಾಮಯ್ಯನವರು ರಾಜೀನಾಮೆ ಬೆನ್ನಲ್ಲೇ ಡಿಕೆ ಶಿವಕುಮಾರ್ ಅವರು ಇದೇ ಜೂನ್ 3ರಂದು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆದ್ರೆ ಅದಕ್ಕೂ ಮುನ್ನವೇ ನಿಯಮಗಳಂತೆ ಶಾಸಕಾಂಗ ಸಭೆ ನಾಯಕನ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅದರಂತೆ ಇಂದು ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ಇದ್ದು, ಇದರಲ್ಲಿ ಡಿಕೆ ಶಿವಕುಮಾರ್ ಅವರನ್ನು ನೂತನ ಶಾಸಕಾಂಗ ಸಭೆಯ ನಾಯಕನನ್ನಾಗಿ ಆಯ್ಕೆ ಮಾಡಲಾಗುತ್ತದೆ. ಹಾಗಾದ್ರೆ, ಆಯ್ಕೆ ಪ್ರತಿಕ್ರಿಯೆ ಹೇಗಿರುತ್ತೆ?

ಬೆಂಗಳೂರು, ಮೇ 30): ಸಿದ್ದರಾಮಯ್ಯನವರು ರಾಜೀನಾಮೆ ಬೆನ್ನಲ್ಲೇ ಡಿಕೆ ಶಿವಕುಮಾರ್ ಅವರು ಇದೇ ಜೂನ್ 3ರಂದು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆದ್ರೆ ಅದಕ್ಕೂ ಮುನ್ನವೇ ನಿಯಮಗಳಂತೆ ಶಾಸಕಾಂಗ ಸಭೆ ನಾಯಕನ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅದರಂತೆ ಇಂದು ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ಇದ್ದು, ಇದರಲ್ಲಿ ಡಿಕೆ ಶಿವಕುಮಾರ್ ಅವರನ್ನು ನೂತನ ಶಾಸಕಾಂಗ ಸಭೆಯ ನಾಯಕನನ್ನಾಗಿ ಆಯ್ಕೆ ಮಾಡಲಾಗುತ್ತದೆ. ಹಾಗಾದ್ರೆ, ಆಯ್ಕೆ ಪ್ರತಿಕ್ರಿಯೆ ಹೇಗಿರುತ್ತೆ ಎನ್ನುವುದನ್ನು ನೋಡುವುದಾದರೆ, ಸಭೆ ಆರಂಭದಲ್ಲಿ ಶಾಸಕರ ಹಾಜರಾತಿ ಪಡೆದುಕೊಳ್ಳುವ ಪ್ರಕ್ರಿಯೆ ಇರಲಿದೆ. ಬಳಿಕ ಸಿಎಲ್ಪಿ ಕಾರ್ಯದರ್ಶಿ ಅಲ್ಲಮ್ ಪ್ರಭು ಪಾಟೀಲ್‌ ಅವರು ಸ್ವಾಗತ ಭಾಷಣ ಮಾಡಲಿದ್ದು, ನಂತರ ರಣದೀಪ್ ಸಿಂಗ್ ಸುರ್ಜೆವಾಲಾ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮಾತನಾಡಲಿದ್ದಾರೆ. ತದನಂತರ ಸಿದ್ದರಾಮಯ್ಯ ಅವರಿಂದ ನೂತನ ಸಿಎಲ್ಪಿ ನಾಯಕನ ಹೆಸರು ಪ್ರಸ್ತಾವ ಮಂಡನೆಯಾಗಲಿದ್ದು, ಅದಕ್ಕೆ ಇಬ್ಬರು ಶಾಸಕರು ಅನುಮೋದನೆ ನೀಡಲಿದ್ದಾರೆ. ಕೊನೆಗೆ ಸಿಎಲ್ಪಿ ನಾಯಕನ ಘೋಷಣೆ ಬಳಿಕ ಡಿಕೆಶಿವಕುಮಾರ್ ಅವರು ಧನ್ಯವಾದ ತಿಳಿಸಲಿದ್ದಾರೆ.

Published on: May 30, 2026 04:13 PM
Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More