AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ಪಾದಯಾತ್ರೆ, ಶಿಕಾರಿಪುರದಿಂದ ಶುರು, 84 ಕ್ಷೇತ್ರಗಳಲ್ಲಿ 10 ಕಿಮೀ ನಡಿಗೆ: ಹರಿಪ್ರಸಾದ್ ಘೋಷಣೆ

ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ಪಾದಯಾತ್ರೆ ನಡೆಸಲಿದೆ. ಸೆಪ್ಟೆಂಬರ್ 30ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತವರು ಶಿಕಾರಿಪುರದಿಂದ ಆರಂಭವಾಗುವ ಯಾತ್ರೆ, ಕಾಂಗ್ರೆಸ್ ಸೋತ 84 ಕ್ಷೇತ್ರಗಳಲ್ಲಿ ನಡೆಯಲಿದೆ. ಪ್ರತಿ ಕ್ಷೇತ್ರದಲ್ಲಿ 10 ಕಿ.ಮೀ. ಪಾದಯಾತ್ರೆ ನಡೆಸುವುದಾಗಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತಿಳಿಸಿದ್ದಾರೆ.

ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ಪಾದಯಾತ್ರೆ, ಶಿಕಾರಿಪುರದಿಂದ ಶುರು, 84 ಕ್ಷೇತ್ರಗಳಲ್ಲಿ 10 ಕಿಮೀ ನಡಿಗೆ: ಹರಿಪ್ರಸಾದ್ ಘೋಷಣೆ
ಬಿಕೆ ಹರಿಪ್ರಸಾದ್Image Credit source: tv9
ಪ್ರಸನ್ನ ಗಾಂವ್ಕರ್​
| Edited By: |

Updated on: Sep 28, 2026 | 2:10 PM

Share

ಬೆಂಗಳೂರು, ಸೆಪ್ಟೆಂಬರ್ 28: ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಕರ್ನಾಟಕದಾದ್ಯಂತ ಕಾಂಗ್ರೆಸ್ ಪಾದಯಾತ್ರೆ ನಡೆಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಸೋಮವಾರ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸೆಪ್ಟೆಂಬರ್ 30ರಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಿಂದ ಪಾದಯಾತ್ರೆ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ. ‘ಭಾರತ್ ಜೋಡೋ ಪಾದಯಾತ್ರೆ-2’ ಹೆಸರಿನಲ್ಲಿ ನಡೆಯಲಿರುವ ಈ ಪಾದಯಾತ್ರೆ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತಿರುವ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ನಡೆಯಲಿದೆ ಎಂದು ಅವರು ಹೇಳಿದ್ದಾರೆ. ರಾಜ್ಯದ ಒಟ್ಟು 84 ಕ್ಷೇತ್ರಗಳಲ್ಲಿ ಪಾದಯಾತ್ರೆ ನಡೆಸುವ ಉದ್ದೇಶವಿದ್ದು, ಪ್ರತಿ ಕ್ಷೇತ್ರದಲ್ಲಿ ಸುಮಾರು 10 ಕಿಲೋಮೀಟರ್ ಪಾದಯಾತ್ರೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಉತ್ತರ ಕರ್ನಾಟಕದ ಕ್ಷೇತ್ರದಲ್ಲಿ ಸಮಾರೋಪ

ಶಿಕಾರಿಪುರದಿಂದ ಆರಂಭವಾಗುವ ಪಾದಯಾತ್ರೆ ಅಕ್ಟೋಬರ್ 20ರವರೆಗೆ ನಡೆಯಲಿದೆ. 84 ಕ್ಷೇತ್ರಗಳಲ್ಲಿ 42 ಕ್ಷೇತ್ರಗಳ ಪಾದಯಾತ್ರೆ ಪೂರ್ಣಗೊಂಡ ಬಳಿಕ ಅಂತಿಮ ಕಾರ್ಯಕ್ರಮ ಎಲ್ಲಿ ನಡೆಯಲಿದೆ ಎಂಬುದನ್ನು ತಿಳಿಸಲಾಗುವುದು ಎಂದು ಹರಿಪ್ರಸಾದ್ ಹೇಳಿದ್ದಾರೆ. ಉತ್ತರ ಕರ್ನಾಟಕದ ಯಾವುದಾದರೂ ಒಂದು ಕ್ಷೇತ್ರದಲ್ಲಿ ಅಂತಿಮ ಕಾರ್ಯಕ್ರಮ ನಡೆಯುವ ಸಾಧ್ಯತೆಯಿದೆ ಎಂದಿದ್ದಾರೆ.

ಚುನಾವಣಾ ಆಯೋಗದ ವಿರುದ್ಧದ ವಿಚಾರಗಳು ಪಾದಯಾತ್ರೆಯ ಪ್ರಮುಖ ಅಜೆಂಡಾಗಳಲ್ಲಿ ಒಂದಾಗಿವೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧವೂ ಪ್ರಶ್ನೆಗಳನ್ನು ಎತ್ತಿರುವ ಹರಿಪ್ರಸಾದ್, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸಿಎಂ ಡಿಕೆ ಶಿವಕುಮಾರ್ ಅವರು ಪಾದಯಾತ್ರೆಯಲ್ಲಿ ಸಕ್ರಿಯವಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ. ಎಸ್​ಐಆರ್ ವಿಚಾರವಾಗಿ ಕಾಂಗ್ರೆಸ್ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿ, ಚುನಾವಣಾ ಆಯೋಗದ ಕ್ರಮಗಳ ಕುರಿತು ಹಲವು ಆರೋಪಗಳನ್ನು ಮಾಡಿದ್ದ ಬೆನ್ನಲ್ಲೇ ಇದೀಗ ಹರಿಪ್ರಸಾದ್ ಪಾದಯಾತ್ರೆಯ ಘೋಷಣೆ ಮಾಡಿದ್ದಾರೆ.

ಬರ ಸೇರಿ ರೈತರ ಸಮಸ್ಯೆ ಬಗ್ಗೆಯೂ ಚರ್ಚೆ: ಹರಿಪ್ರಸಾದ್

ಪಾದಯಾತ್ರೆಯ ವೇಳೆ ಬರ ಪರಿಸ್ಥಿತಿ ಸೇರಿದಂತೆ ರೈತರ ಸಮಸ್ಯೆಗಳ ಬಗ್ಗೆಯೂ ಚರ್ಚಿಸಿ, ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಹರಿಪ್ರಸಾದ್ ತಿಳಿಸಿದ್ದಾರೆ. 2028ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡೇ ಪಾದಯಾತ್ರೆ ನಡೆಸಲಾಗುತ್ತಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಹಿಂದಿನ ಚುನಾವಣೆಯಲ್ಲಿ ಜನರಿಗೆ ಬಿಜೆಪಿಯ ಕುರಿತು ಸರಿಯಾದ ಮಾಹಿತಿ ಇರಲಿಲ್ಲ. ಈಗ ಜನರಿಗೆ ಮಾಹಿತಿ ಸಿಕ್ಕಿದ್ದು, ಜಾಗೃತರಾಗುತ್ತಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: RSS, ಬಿಜೆಪಿಯವರನ್ನು ಬೆಂಗಳೂರಿನಿಂದ ಓಡಿಸಬೇಕು: ವಿವಾದಾತ್ಮಕ ಹೇಳಿಕೆ ನೀಡಿದ ಬಿ.ಕೆ. ಹರಿಪ್ರಸಾದ್

ರಾಹುಲ್ ಗಾಂಧಿ ಅವರ ಹಿಂದಿನ ಯಾತ್ರೆಗಳಲ್ಲಿ ಪ್ರಸ್ತಾಪಿಸಿದ್ದ ವಿಚಾರಗಳನ್ನು ಮತ್ತೆ ಜನರ ಮುಂದೆ ಇಡಲಾಗುವುದು ಎಂದು ಹರಿಪ್ರಸಾದ್ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ!
ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ!
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ