AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಕುರ್ಚಿ ಕಾಳಗ ದೆಹಲಿಗೆ ಶಿಫ್ಟ್: ದೆಹಲಿ ತಲುಪುತ್ತಿದ್ದಂತೆಯೇ ಡಿಕೆಶಿ ನಂಬರ್ ಗೇಮ್!

ಕಾಂಗ್ರೆಸ್ ಕುರ್ಚಿ ಕಾಳಗ ದೆಹಲಿಗೆ ಶಿಫ್ಟ್: ದೆಹಲಿ ತಲುಪುತ್ತಿದ್ದಂತೆಯೇ ಡಿಕೆಶಿ ನಂಬರ್ ಗೇಮ್!

ಪ್ರಸನ್ನ ಗಾಂವ್ಕರ್​
| Edited By: |

Updated on: Feb 11, 2026 | 8:45 AM

Share

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಮತ್ತೆ ಜೋರಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ಅವರು ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ 136 ಎಂಬ ಸಂಖ್ಯೆಯನ್ನು ಉಲ್ಲೇಖಿಸಿ ನಂಬರ್ ಗೇಮ್ ಆರಂಭಿಸಿದ್ದು, ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದಿದ್ದಾರೆ.

ಬೆಂಗಳೂರು, ಫೆಬ್ರವರಿ 11: ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರಕ್ಕಾಗಿ ನಡೆಯುತ್ತಿರುವ ಪೈಪೋಟಿ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಲಕ್ಷಣ ಕಾಣಿಸಿದೆ. ಡಿಸಿಎಂ ಡಿಕೆ ಶಿವಕುಮಾರ್ ಅವರು ಅಸ್ಸಾಂ ಚುನಾವಣಾ ಉಸ್ತುವಾರಿ ನೆಪದಲ್ಲಿ ದೆಹಲಿಗೆ ತೆರಳಿದ್ದು, ಹೈಕಮಾಂಡ್ ನಾಯಕರ ಪೈಕಿ ಕೆಲವ ಭೇಟಿಯಾಗಿದ್ದಾರೆ ಎನ್ನಲಾಗಿದೆ. ದೆಹಲಿಗೆ ತಲುಪುಸುತ್ತಿದ್ದಂತೆಯೇ ಅವರು ‘136’ ಎಂಬ ಸಂಖ್ಯೆಯನ್ನು ಉಲ್ಲೇಖಿಸಿ ನಂಬರ್ ಗೇಮ್ ಆರಂಭಿಸಿದ್ದಾರೆ. ಇದೇ ವೇಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಲಸಂಪನ್ಮೂಲ ಹಾಗೂ ಬೆಂಗಳೂರು ಅಭಿವೃದ್ಧಿ ಇಲಾಖೆಗಳ ಬಜೆಟ್ ಸಭೆ ನಡೆಸಿದ್ದು, ಡಿ.ಕೆ. ಶಿವಕುಮಾರ್ ಗೈರಾಗಿದ್ದರು. ಸಿದ್ದರಾಮಯ್ಯ ಅವರು ತಾವು ಹೈಕಮಾಂಡ್‌ನ ಯಾವುದೇ ನಿರ್ಧಾರಕ್ಕೂ ಬದ್ಧ ಎಂದು ಹೇಳಿಕೆ ನೀಡಿದ್ದಾರೆ. ಏತನ್ಮಧ್ಯೆ, ಪಕ್ಷದ ಮುಖಂಡರು ಬೇಜವಾಬ್ದಾರಿ ಹೇಳಿಕೆಗಳನ್ನು ನೀಡುವುದರಿಂದ ಪಕ್ಷಕ್ಕೆ ಡ್ಯಾಮೇಜ್ ಆಗುತ್ತದೆ ಎಂದು ಡಿಕೆ ಶಿವಕುಮಾರ್ ಪರೋಕ್ಷವಾಗಿ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ. ಒಟ್ಟಾರೆ, ರಾಜ್ಯ ಕಾಂಗ್ರೆಸ್‌ನ ಕುರ್ಚಿ ಕಾಳಗ ದೆಹಲಿಗೆ ಶಿಫ್ಟ್ ಆದಂತಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ