ಕಾಂಗ್ರೆಸ್ನಿಂದ ಒಂದು ಗುಂಪು ಬಂದ್ರೆ BJP ಸರ್ಕಾರ ರಚನೆ ಮಾಡುತ್ತಾ? ವಿಜಯೇಂದ್ರ ಹೇಳಿದ್ದೇನು?
ಸಿಎಂ ಕುರ್ಚಿಗಾಗಿ ಕರ್ನಾಟಕ ಕಾಂಗ್ರೆಸ್ನಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಅದರಲ್ಲೂ ಮುಖ್ಯವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಮುಸುಕಿನ ಗುದ್ದಾಟ ಶುರುವಾಗಿದೆ. ಈ ನಡುವೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡುತ್ತೆ ಎನ್ನುವ ಹೀಗೊಂದು ಚರ್ಚೆಯಾಗುತ್ತಿದ್ದು, ಈ ಬಗ್ಗೆ ಶಿರಸಿಯಲ್ಲಿ ಖುದ್ದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದು, ರಾಜ್ಯದ ಮತದಾರರು ಕಾಂಗ್ರೆಸ್ಗೆ ಸ್ಪಷ್ಟ ಬಹುಮತ ನೀಡಿದ್ದಾರೆ. ಬಿಜೆಪಿಗೆ ವಿರೋಧ ಪಕ್ಷದಲ್ಲಿ ಕೂರಿಸಿದ್ದಾರೆ. ನಾವು ಕಾಂಗ್ರೆಸ್ ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡುತ್ತಿದ್ದೇವೆ. ಸದ್ಯಕ್ಕೆ ರಾಜ್ಯದಲ್ಲಿ ಸರ್ಕಾರ ರಚಿಸುವ ಬಗ್ಗೆ ನಮಗೆ ಆಸಕ್ತಿಯಿಲ್ಲ ಎಂದು ಸ್ಪಷ್ಟಪಡಿಸಿದರು.
ಕಾರವಾರ, (ಡಿಸೆಂಬರ್ 01): ಸಿಎಂ ಕುರ್ಚಿಗಾಗಿ ಕರ್ನಾಟಕ ಕಾಂಗ್ರೆಸ್ನಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಅದರಲ್ಲೂ ಮುಖ್ಯವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಮುಸುಕಿನ ಗುದ್ದಾಟ ಶುರುವಾಗಿದೆ. ಈ ನಡುವೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡುತ್ತೆ ಎನ್ನುವ ಹೀಗೊಂದು ಚರ್ಚೆಯಾಗುತ್ತಿದ್ದು, ಈ ಬಗ್ಗೆ ಶಿರಸಿಯಲ್ಲಿ ಖುದ್ದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದು, ರಾಜ್ಯದ ಮತದಾರರು ಕಾಂಗ್ರೆಸ್ಗೆ ಸ್ಪಷ್ಟ ಬಹುಮತ ನೀಡಿದ್ದಾರೆ. ಬಿಜೆಪಿಗೆ ವಿರೋಧ ಪಕ್ಷದಲ್ಲಿ ಕೂರಿಸಿದ್ದಾರೆ. ನಾವು ಕಾಂಗ್ರೆಸ್ ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡುತ್ತಿದ್ದೇವೆ. ಸದ್ಯಕ್ಕೆ ರಾಜ್ಯದಲ್ಲಿ ಸರ್ಕಾರ ರಚಿಸುವ ಬಗ್ಗೆ ನಮಗೆ ಆಸಕ್ತಿಯಿಲ್ಲ ಎಂದು ಸ್ಪಷ್ಟಪಡಿಸಿದರು.
