Mekedatu Padyatra: ಕೈ ಮೇಕೆದಾಟು ಪಾದಯಾತ್ರೆ ಮೊಟುಕಿಗೆ ಕಾರಣ ಯಾರು? ಇದರಿಂದ ಪಕ್ಷಕ್ಕೆ ಮುಖಭಂಗ ಆಗಿಲ್ಲವೇ?

Mekedatu Padyatra: ಕೈ ಮೇಕೆದಾಟು ಪಾದಯಾತ್ರೆ ಮೊಟುಕಿಗೆ ಕಾರಣ ಯಾರು? ಇದರಿಂದ ಪಕ್ಷಕ್ಕೆ ಮುಖಭಂಗ ಆಗಿಲ್ಲವೇ?

TV9 Web
| Updated By: ಆಯೇಷಾ ಬಾನು

Updated on: Jan 15, 2022 | 8:35 AM

ಹೈಕೋರ್ಟ್ ಪಾದಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಕ್ರಮ ಕೈಗೊಂಡಿಲ್ಲ ಅಂತ​ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಹೀಗಿದ್ದೂ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪಾದಯಾತ್ರೆ ಮುಂದುವರಿಸುತ್ತೇವೆ ಎಂಬ ಹಠಕ್ಕೆ ಬಿದ್ದಿದ್ದರು. ಈ ಕುರಿತು ರಾಮನಗರ ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಸಿದ್ದರು. ಸಭೆ ನಡೆಸಿದ ಬಳಿಕ ಹೈಕಮಾಂಡ್ ಸೂಚನೆಯಂತೆ ಐದನೇ ದಿನಕ್ಕೆ ಪಾದಯಾತ್ರೆ ನಿಲ್ಲಿಸಲು ನಿರ್ಧರಿಸಿದ್ರು.

ಕಾಂಗ್ರೆಸ್ ಪಕ್ಷ ಮೇಕೆದಾಟುವಿನಿಂದ ಬೆಂಗಳೂರಿಗೆ ಕೈಗೊಂಡಿದ್ದ ಪಾದಯಾತ್ರೆಯನ್ನು ನಿಲ್ಲಿಸುವಂತಾಯ್ತು. ಇದಕ್ಕೆ ಕಾರಣರು ಯಾರು? ಇದರಿಂದ ಪಕ್ಷಕ್ಕೆ ಮುಖಭಂಗ ಆಗಿಲ್ಲವೇ? ಈ ಕುರಿತು ಟಿವಿ9 ಡಿಜಿಟಲ್ ಲೈವ್ ನಲ್ಲಿ ಚರ್ಚಿಸಲಾಗಿದೆ. ಆಂಕರ್ ಚಂದ್ರಮೋಹನ್ ಈ ಚರ್ಚೆ ನಡೆಸಿಕೊಟ್ಟಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಕೊರೊನಾ ಮೂರನೇ ಅಲೆ ನಿಯಂತ್ರಿಸಲು ಸರ್ಕಾರ ಕಠಿಣ ನಿಯಮಗಳನ್ನ ಜಾರಿಗೆ ತಂದಿದೆ. ಈ ನಡುವೆ ಕಾಂಗ್ರೆಸ್ ನಾಯಕರು ಕೊರೊನಾ ನಿಯಮಗಳನ್ನ ಉಲ್ಲಂಘಿಸಿ 11 ದಿನಗಳ ಕಾಲ ಮೇಕೆದಾಟು ಯೋಜನೆ ಆಗ್ರಹಿಸಿ ಪಾದಯಾತ್ರೆ ಕೈಗೊಂಡಿದ್ದರು. ಜ.13 ಐದನೇ ದಿನದ ಪಾದಯಾತ್ರೆ ನಡೆಯಬೇಕಿತ್ತು. ಆದರೆ ಹೈಕೋರ್ಟ್ ಪಾದಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಕ್ರಮ ಕೈಗೊಂಡಿಲ್ಲ ಅಂತ​ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಹೀಗಿದ್ದೂ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪಾದಯಾತ್ರೆ ಮುಂದುವರಿಸುತ್ತೇವೆ ಎಂಬ ಹಠಕ್ಕೆ ಬಿದ್ದಿದ್ದರು. ಈ ಕುರಿತು ರಾಮನಗರ ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಸಿದ್ದರು. ಸಭೆ ನಡೆಸಿದ ಬಳಿಕ ಹೈಕಮಾಂಡ್ ಸೂಚನೆಯಂತೆ ಐದನೇ ದಿನಕ್ಕೆ ಪಾದಯಾತ್ರೆ ನಿಲ್ಲಿಸಲು ನಿರ್ಧರಿಸಿದ್ರು.