38 ಸಾವಿರ ಕೋಟಿ ರೂ.ಬಾಕಿ ಉಳಿಸಿಕೊಂಡ ಸರ್ಕಾರ: ಸಿಎಂ ಭೇಟಿಯಾದ ಗುತ್ತಿಗೆದಾರರ ನಿಯೋಗ

Updated on: Nov 02, 2026 | 10:39 PM

ಕರ್ನಾಟಕದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್ ಹಾಗೂ ಪದಾಧಿಕಾರಿಗಳ ನಿಯೋಗ ಗೃಹ ಕಚೇರಿ ಕೃಷ್ಣಾದಲ್ಲಿಂದು ಸಿಎಂ ಡಿ.ಕೆ ಶಿವಕುಮಾರ್‌ ಅವರನ್ನು ಭೇಟಿಯಾಗಿ ಬಾಕಿ ಇರುವ 38 ಸಾವಿರ ಕೋಟಿ ರೂ. ಬಿಡುಗಡೆಗೆ ಮನವಿ ಮಾಡಿತು. ಸಭೆ ಬಳಿಕ ಕರ್ನಾಟಕ ರಾಜ್ಯ ಗುತ್ತಿಗೆದಾರ ಸಂಘದ ಅಧ್ಯಕ್ಷ ಜಿ.ಮಂಜುನಾಥ್ ಮಾತನಾಡಿ, ಸಿಎಂ ಡಿ.ಕೆ.ಶಿವಕುಮಾರ್ ಬಳಿ ನಾವು ಮೂರು ಬೇಡಿಕೆಗಳು ಇಟ್ಟಿದ್ದೇವೆ. ಗುತ್ತಿಗೆದಾರರಿಗೆ ಇನ್ನೂ 38 ಸಾವಿರ ಕೋಟಿ ಹಣ ಬಾಕಿ ಕೊಡಬೇಕಿದೆ. ಮೊದಲು ಹಳೆ ವರ್ಕ್ ಬಿಲ್ ಬಳಿಕ ಹೊಸ ಕಾಮಗಾರಿಗಳ ಬಿಲ್​​ ಕೊಡಿ ಎಂದು ಕೇಳಿದ್ದೇವೆ ಎಂದರು.

ಬೆಂಗಳೂರು, (ನವೆಂಬರ್ 02): ಕರ್ನಾಟಕದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್ ಹಾಗೂ ಪದಾಧಿಕಾರಿಗಳ ನಿಯೋಗ ಗೃಹ ಕಚೇರಿ ಕೃಷ್ಣಾದಲ್ಲಿಂದು ಸಿಎಂ ಡಿ.ಕೆ ಶಿವಕುಮಾರ್‌ ಅವರನ್ನು ಭೇಟಿಯಾಗಿ ಬಾಕಿ ಇರುವ 38 ಸಾವಿರ ಕೋಟಿ ರೂ. ಬಿಡುಗಡೆಗೆ ಮನವಿ ಮಾಡಿತು. ಸಭೆ ಬಳಿಕ ಕರ್ನಾಟಕ ರಾಜ್ಯ ಗುತ್ತಿಗೆದಾರ ಸಂಘದ ಅಧ್ಯಕ್ಷ ಜಿ.ಮಂಜುನಾಥ್ ಮಾತನಾಡಿ, ಸಿಎಂ ಡಿ.ಕೆ.ಶಿವಕುಮಾರ್ ಬಳಿ ನಾವು ಮೂರು ಬೇಡಿಕೆಗಳು ಇಟ್ಟಿದ್ದೇವೆ. ಗುತ್ತಿಗೆದಾರರಿಗೆ ಇನ್ನೂ 38 ಸಾವಿರ ಕೋಟಿ ಹಣ ಬಾಕಿ ಕೊಡಬೇಕಿದೆ. ಮೊದಲು ಹಳೆ ವರ್ಕ್ ಬಿಲ್ ಬಳಿಕ ಹೊಸ ಕಾಮಗಾರಿಗಳ ಬಿಲ್​​ ಕೊಡಿ ಎಂದು ಕೇಳಿದ್ದೇವೆ ಎಂದರು.

ಸಿಎಂ ಗ್ರಾಮೀಣಾಭಿವೃದ್ಧಿ ರಸ್ತೆ ಯೋಜನೆಯಡಿ ಕಾಮಗಾರಿ ಬಿಲ್ ಬಾಕಿ ಇತ್ತು. 16 ಸಾವಿರ ಕೋಟಿ ಬಾಕಿ ಬಿಲ್​ ಕ್ಲಿಯರ್ ಮಾಡುವುದಾಗಿ ಹೇಳಿದ್ದಾರೆ. ಸೆಕ್ರೆಟರಿ ಅವರೇ ಜವಾಬ್ದಾರಿ ತಗೆದುಕೊಂಡಿದ್ದಾರೆ. ಜಲಸಂಪನ್ಮೂಲ ಇಲಾಖೆಯಲ್ಲಿ 14 ಸಾವಿರ ಕೋಟಿ ಬಿಲ್ ಬಾಕಿ ಇದೆ. ಅದನ್ನು ಸಿನಿಯಾರಿಟಿಯಡಿ ಬಿಡುಗಡೆ ಮಾಡಿ ಎಂದಿದ್ದೇವೆ. ನಾಳೆಯಿಂದಲೇ ಆದೇಶ ಮಾಡುವುದಾಗಿ ಸಿಎಂ ಡಿಕೆಶಿ ಹೇಳಿದ್ದಾರೆ. ಸಿನಿಯಾರಿಟಿ ಪ್ರಕಾರವೇ ಕೊಡಬೇಕು ಎಂದು ಆದೇಶ ಮಾಡಲಿದ್ದಾರೆ ಎಂದು ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More