ಗೋ ಹತ್ಯೆ ಮಾಡುವವರನ್ನು ಗುಂಡಿಕ್ಕಬೇಕು: ಸಚಿವ ಮಂಕಾಳು ವೈದ್ಯ ಹೇಳಿಕೆಗೆ ಪರಮೇಶ್ವರ ಹೇಳಿದ್ದಿಷ್ಟು
ಉತ್ತರ ಕನ್ನಡದ ಹೊನ್ನಾವರದಲ್ಲಿ ಗರ್ಭಿಣಿ ಹಸುವಿನ ಕೊಲೆಯಿಂದಾಗಿ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯರು ಗೋಹತ್ಯಾಕಾರರನ್ನು ಸಾರ್ವಜನಿಕವಾಗಿ ಗುಂಡಿಕ್ಕಬೇಕೆಂದು ಒತ್ತಾಯಿಸಿದ್ದಾರೆ. ಆದರೆ, ಗೃಹ ಸಚಿವ ಜಿ ಪರಮೇಶ್ವರ್ ಅವರು ಈ ಹೇಳಿಕೆ ವೈಯಕ್ತಿಕ ಎಂದು ಹೇಳುವ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಈ ಘಟನೆಯಿಂದ ರಾಜಕೀಯ ಚರ್ಚೆಗಳು ತೀವ್ರಗೊಂಡಿವೆ.
ಕಾರವಾರ, ಫೆಬ್ರವರಿ 04: ತೀರ ಇತ್ತೀಚಿಗೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಗರ್ಭ ಧರಿಸಿದ್ದ ಹಸುವನ್ನು ಕಡಿಯಲಾಗಿತ್ತು. ಇದು ರಾಜ್ಯದ್ಯಂತ ಸಾಕಷ್ಟು ಸುದ್ದಿಯಾಗಿತ್ತು. ಇದಕ್ಕೆ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಗೋ ಕಳವು, ಹತ್ಯೆ ಮಾಡುವವರನ್ನು ರಸ್ತೆಯಲ್ಲಿ ಸರ್ಕಲ್ನಲ್ಲಿ ನಿಲ್ಲಿಸಿ ಸಾರ್ವಜನಿಕವಾಗಿ ಗುಂಡಿಕ್ಕಬೇಕು ಎಂದಿದ್ದರು. ತಮ್ಮದೇ ಸರ್ಕಾರದ ಸಚಿವರ ಹೇಳಿಕೆಗೆ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, “ಮಂಕಾಳು ವೈದ್ಯ ವೈಯಕ್ತಿಕವಾಗಿ ಹೇಳಿರುತ್ತಾರೆ” ಎಂದು ಜಾರಿಕೊಂಡರು.