AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಕುರ್ಚಿ ಗುದ್ದಾಟದ ನಡುವೆ ದಿಢೀರನೆ ಮುಂಬೈನಲ್ಲಿ ಪ್ರತ್ಯಕ್ಷರಾದ ಡಿಸಿಎಂ ಡಿಕೆ ಶಿವಕುಮಾರ್

ಕರ್ನಾಟಕದ ಕುರ್ಚಿ ಗುದ್ದಾಟದ ನಡುವೆ ದಿಢೀರನೆ ಮುಂಬೈನಲ್ಲಿ ಪ್ರತ್ಯಕ್ಷರಾದ ಡಿಸಿಎಂ ಡಿಕೆ ಶಿವಕುಮಾರ್

ಸುಷ್ಮಾ ಚಕ್ರೆ
|

Updated on: Nov 27, 2025 | 11:15 PM

Share

ಕರ್ನಾಟಕದ ಕಾಂಗ್ರೆಸ್​ನಲ್ಲಿ ನಾಯಕತ್ವಕ್ಕಾಗಿ ಹಗ್ಗಜಗ್ಗಾಟ ಶುರುವಾಗಿದ್ದು, ಸಿಎಂ ಸಿದ್ದರಾಮಯ್ಯ ಕುರ್ಚಿಯಿಂದ ಕೆಳಗಿಳಿಯುತ್ತಾರಾ? ಎಂಬ ಕುತೂಹಲವನ್ನು ಮೂಡಿಸಿದೆ. ಇಬ್ಬರೂ ನಾಯಕರ ಬೆಂಬಲಿಗರು ಲಾಬಿ ಮಾಡುವ ಮೂಲಕ ತಮ್ಮ ನಾಯಕನೇ ಸಿಎಂ ಆಗಿ ಅಧಿಕಾರ ನಡೆಸಬೇಕೆಂದು ಪಟ್ಟು ಹಿಡಿದಿದ್ದಾರೆ. ಈ ಶನಿವಾರ ಕರ್ನಾಟಕದ ಅಧಿಕಾರದ ಗುದ್ದಾಟಕ್ಕೆ ಕ್ಲೈಮ್ಯಾಕ್ಸ್ ಸಿಗಲಿದೆ. ಇದೆಲ್ಲದರ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ದಿಢೀರನೆ ಮುಂಬೈನಲ್ಲಿ ಪ್ರತ್ಯಕ್ಷರಾಗಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವರು ಮುಂಬೈಗೆ ತೆರಳಿದ್ದಾರೆ. ಆದರೆ, ಈ ಭೇಟಿಯ ಹಿಂದೆಯೂ ರಾಜಕೀಯ ಉದ್ದೇಶವಿರಬಹುದು ಎಂಬ ಅನುಮಾನವೂ ಕಾಡುತ್ತಿದೆ.

ಬೆಂಗಳೂರು, ನವೆಂಬರ್ 27: ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ನಡುವೆ ನಡೆಯುತ್ತಿದ್ದ ಮುಸುಕಿನ ಗುದ್ದಾಟ ಕಳೆದ ವಾರದಿಂದ ಇಡೀ ದೇಶದ ಗಮನ ಸೆಳೆದಿದೆ. ಕರ್ನಾಟಕದ ಕಾಂಗ್ರೆಸ್​ನಲ್ಲಿ ನಾಯಕತ್ವಕ್ಕಾಗಿ ಹಗ್ಗಜಗ್ಗಾಟ ಶುರುವಾಗಿದ್ದು, ಸಿಎಂ ಸಿದ್ದರಾಮಯ್ಯ ಕುರ್ಚಿಯಿಂದ ಕೆಳಗಿಳಿಯುತ್ತಾರಾ? ಎಂಬ ಕುತೂಹಲವನ್ನು ಮೂಡಿಸಿದೆ. ಇಬ್ಬರೂ ನಾಯಕರ ಬೆಂಬಲಿಗರು ಲಾಬಿ ಮಾಡುವ ಮೂಲಕ ತಮ್ಮ ನಾಯಕನೇ ಸಿಎಂ ಆಗಿ ಅಧಿಕಾರ ನಡೆಸಬೇಕೆಂದು ಪಟ್ಟು ಹಿಡಿದಿದ್ದಾರೆ. ಈ ಶನಿವಾರ ಕರ್ನಾಟಕದ ಅಧಿಕಾರದ ಗುದ್ದಾಟಕ್ಕೆ ಕ್ಲೈಮ್ಯಾಕ್ಸ್ ಸಿಗಲಿದೆ. ಇದೆಲ್ಲದರ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ದಿಢೀರನೆ ಮುಂಬೈನಲ್ಲಿ ಪ್ರತ್ಯಕ್ಷರಾಗಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವರು ಮುಂಬೈಗೆ ತೆರಳಿದ್ದಾರೆ. ಆದರೆ, ಈ ಭೇಟಿಯ ಹಿಂದೆಯೂ ರಾಜಕೀಯ ಉದ್ದೇಶವಿರಬಹುದು ಎಂಬ ಅನುಮಾನವೂ ಕಾಡುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ