ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾದ್ರಾ ಡಿಕೆ ಶಿವಕುಮಾರ್? ಎಲ್ಲಾ ಗೊಂದಲಗಳಿಗೆ ಡಿಸಿಎಂ ತೆರೆ

Updated on: Sep 22, 2025 | 5:05 PM

ಡಿಕೆ ಶಿವಕುಮಾರ್ ಅವರು ದೆಹಲಿ ಪ್ರವಾಸದಲ್ಲಿದ್ದು, ಅಮಿತ್ ಶಾ ಅವರನ್ನ ಭೇಟಿಯಾಗಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ಸಂಬಂಧ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಡಿಕೆ ಶಿವಕುಮಾರ್, ದೆಹಲಿಯಲ್ಲಿ ಅಮಿತ್ ಶಾರನ್ನು ನಾನು ಭೇಟಿಯಾಗಿಲ್ಲ. ಕೆಲವರಿಗೆ ನನ್ನ ನೆನಪಿಸಿಕೊಳ್ಳದಿದ್ದರೆ ನಿದ್ದೆ ಬರುವುದಿಲ್ಲ ಅಮಿತ್ ಶಾ ಭೇಟಿಯಾಗಲು ನನಗೆ ತಲೆಕೆಟ್ಟಿದೆಯಾ? ಎಂದು ಗರಂ ಆಗಿಯೇ ಸ್ಪಷ್ಟನೆ ನೀಡಿದರು.

ನವದೆಹಲಿ, (ಸೆಪ್ಟೆಂಬರ್ 22): ಮಹಾಶಿವರಾತ್ರಿ ಆಚರಣೆ ಸಂಬಂಧ ಇಶಾ ಫೌಂಡೇಶನ್‌ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್‌ ಅವರ ಸಮ್ಮುಖದಲ್ಲಿ ಕೊಯಮತ್ತೂರಿನ ಇಶಾ ಕೇಂದ್ರದಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ   ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಭಾಗಿಯಾಗಿದ್ದರು. ಇದರ ಜೊತೆಗೆ ಡಿಕೆ ಶಿವಕುಮಾರ್ ಸಹ ವೇದಿಕೆ ಹಂಚಿಕೊಂಡಿದ್ದರು. ರಾಜಕೀಯದಲ್ಲಿ ಶತ್ರುಗಳಂತೆ ಇರುವ ಇವರಿಬ್ಬರು ಒಂದೇ ವೇದಿಕೆಯಲ್ಲಿ ಕಾಣಸಿಕೊಂಡಿದ್ದಕ್ಕೆ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಸ್ವತಃ ಎಐಸಿಸಿಯ ಪ್ರಧಾನ ಕಾರ್ಯದರ್ಶಿ ಪಿ. ವಿ. ಮೋಹನ್, ಡಿಕೆಶಿ ಆ ಕಾರ್ಯಕ್ರಮಕ್ಕೆ ಹೋಗಬಾರದಿತ್ತು ಎಂದು ಟ್ವೀಟ್ ಮಾಡಿದ್ದರು. ಆದರೆ, ಇದ್ಯಾವುದಕ್ಕೂ ಕ್ಯಾರೇ ಮಾಡದ ಡಿಕೆಶಿ, ಕೊಯಂಬತ್ತೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಕ್ಕೆ ಪರ ವಿರೋಧದ ಚರ್ಚೆಗಳು ಜೋರಾಗಿದ್ದವು. ಈ ಎಲ್ಲಾ ಬೆಳವಣಿಗಳ ನಡೆದ ಬಳಿಕ ಇದೀಗ ಡಿಕೆ ಶಿವಕುಮಾರ್ ಅವರು ದೆಹಲಿ ಪ್ರವಾಸದಲ್ಲಿದ್ದು, ಅಮಿತ್ ಶಾ ಅವರನ್ನ ಭೇಟಿಯಾಗಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.

ಈ ಸಂಬಂಧ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಡಿಕೆ ಶಿವಕುಮಾರ್, ದೆಹಲಿಯಲ್ಲಿ ಅಮಿತ್ ಶಾರನ್ನು ನಾನು ಭೇಟಿಯಾಗಿಲ್ಲ. ಕೆಲವರಿಗೆ ನನ್ನ ನೆನಪಿಸಿಕೊಳ್ಳದಿದ್ದರೆ ನಿದ್ದೆ ಬರುವುದಿಲ್ಲ ಅಮಿತ್ ಶಾ ಭೇಟಿಯಾಗಲು ನನಗೆ ತಲೆಕೆಟ್ಟಿದೆಯಾ? ಎಂದು ಗರಂ ಆಗಿಯೇ ಸ್ಪಷ್ಟನೆ ನೀಡಿದರು.