Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆ ಶಿವಕುಮಾರ್

ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆ ಶಿವಕುಮಾರ್

ಹರೀಶ್ ಜಿ.ಆರ್​. ನವದೆಹಲಿ
| Updated By: Ganapathi Sharma

Updated on: Mar 28, 2025 | 11:33 AM

ಕರ್ನಾಟಕ ರಾಜಕಾರಣದಲ್ಲಿ, ಅದರಲ್ಲೂ ಆಡಳಿತಾರೂಢ ಕಾಂಗ್ರೆಸ್​​ನಲ್ಲಿ ಹಲವು ಮಹತ್ವದ ಬೆಳವಣಿಗೆಗಳಾಗುತ್ತಿರುವ ಸಂದರ್ಭದಲ್ಲೇ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷರನ್ನೂ ಅವರು ವರಿಷ್ಠರ ಜತೆ ಭೇಟಿ ಮಾಡಿಸಿದ್ದಾರೆ.

ನವದೆಹಲಿ, ಮಾರ್ಚ್ 28: ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಶುಕ್ರವಾರ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದರು. ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕರ್ನಾಟಕ ಕಾಂಗ್ರೆಸ್​​ನ ಜಿಲ್ಲಾ ಅಧ್ಯಕ್ಷರು ವರಿಷ್ಠರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಕರ್ನಾಟಕ ರಾಜಕೀಯದಲ್ಲಿ, ಆಡಳಿತಾರೂಢ ಕಾಂಗ್ರೆಸ್​​ನಲ್ಲಿ ಮಹತ್ವದ ಬೆಳವಣಿಗೆಗಳು ಆಗುತ್ತಿರುವ ಸಂದರ್ಭದಲ್ಲೇ ಈ ಭೇಟಿ ನಡೆದಿದೆ. ಬುಧವಾರವಷ್ಟೇ ಸಚಿವ ಸತೀಶ್ ಜಾರಕಿಹೊಳಿ ಎಐಸಿಸಿ ಅಧ್ಯಕ್ಷರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದರು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ