ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆ ಶಿವಕುಮಾರ್
ಕರ್ನಾಟಕ ರಾಜಕಾರಣದಲ್ಲಿ, ಅದರಲ್ಲೂ ಆಡಳಿತಾರೂಢ ಕಾಂಗ್ರೆಸ್ನಲ್ಲಿ ಹಲವು ಮಹತ್ವದ ಬೆಳವಣಿಗೆಗಳಾಗುತ್ತಿರುವ ಸಂದರ್ಭದಲ್ಲೇ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷರನ್ನೂ ಅವರು ವರಿಷ್ಠರ ಜತೆ ಭೇಟಿ ಮಾಡಿಸಿದ್ದಾರೆ.
ನವದೆಹಲಿ, ಮಾರ್ಚ್ 28: ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಶುಕ್ರವಾರ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದರು. ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕರ್ನಾಟಕ ಕಾಂಗ್ರೆಸ್ನ ಜಿಲ್ಲಾ ಅಧ್ಯಕ್ಷರು ವರಿಷ್ಠರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಕರ್ನಾಟಕ ರಾಜಕೀಯದಲ್ಲಿ, ಆಡಳಿತಾರೂಢ ಕಾಂಗ್ರೆಸ್ನಲ್ಲಿ ಮಹತ್ವದ ಬೆಳವಣಿಗೆಗಳು ಆಗುತ್ತಿರುವ ಸಂದರ್ಭದಲ್ಲೇ ಈ ಭೇಟಿ ನಡೆದಿದೆ. ಬುಧವಾರವಷ್ಟೇ ಸಚಿವ ಸತೀಶ್ ಜಾರಕಿಹೊಳಿ ಎಐಸಿಸಿ ಅಧ್ಯಕ್ಷರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ