AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದಲ್ಲಿ ಎನ್​ಡಿಎ ಜಯಭೇರಿ: ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು ನೋಡಿ

ಬಿಹಾರದಲ್ಲಿ ಎನ್​ಡಿಎ ಜಯಭೇರಿ: ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು ನೋಡಿ

Ganapathi Sharma
|

Updated on: Nov 14, 2025 | 1:54 PM

Share

DK Shivakumar Reaction to Bihar Election Results: ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್ ಅವರು ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶಗಳಿಗೆ ಪ್ರತಿಕ್ರಿಯಿಸಿದ್ದಾರೆ. ಮತದಾರರ ತೀರ್ಪಿಗೆ ತಲೆಬಾಗುವುದಾಗಿ ಹೇಳಿದ್ದಾರೆ. ಇದಲ್ಲದೆ, ಎರಡನೇ ಬೆಳೆಗೆ ನೀರು ಪೂರೈಕೆ, ಡ್ಯಾಂ ಗೇಟ್ ರಿಪೇರಿ ಮತ್ತು ತುಂಗಭದ್ರಾ ಯೋಜನೆ ಕುರಿತು ಕೈಗೊಳ್ಳಬೇಕಾದ ನಿರ್ಧಾರಗಳ ಬಗ್ಗೆಯೂ ಮಾಹಿತಿ ನೀಡಿದ್ದಾರೆ.

ಬೆಂಗಳೂರು, ನವೆಂಬರ್ 14: ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ ಬಹುತೇಕ ಪ್ರಕಟವಾಗಿದ್ದು, ಎನ್​ಡಿಎ ಮೈತ್ರಿಕೂಟ ಭರ್ಜರಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್​​​ ನೇತೃತ್ವದ ಮಹಾಘಟಬಂಧನ ಕೇವಲ 35 ರಷ್ಟು ಸ್ಥಾನಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ. ಅದರಲ್ಲೂ ಕಾಂಗ್ರೆಸ್ ಕೇವಲ 4 ಕ್ಷೆತ್ರಗಳಲ್ಲಷ್ಟೇ ಮುನ್ನಡೆಯಲ್ಲಿದೆ. ಈ ಬಗ್ಗೆ ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದು,ತಾಂಶಗಳ ಬಗ್ಗೆ ತಮ್ಮ ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಬಿಹಾರದಲ್ಲಿ ಎನ್​ಡಿಎ ಮೈತ್ರಿಕೂಟ ಮುನ್ನಡೆ ಸಾಧಿಸಿರುವ ಬಗ್ಗೆ ಪ್ರಸ್ತಾಪಿಸಿದಾಗ, ಬಿಹಾರದಲ್ಲಿ ಮತದಾರರು ತೀರ್ಪನ್ನು ಕೊಟ್ಟಿದ್ದಾರೆ. ಆ ತೀರ್ಪಿಗೆ ನಾನು ತಲೆಬಾಗುತ್ತೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಮತದಾರರ ತೀರ್ಪೇ ಅಂತಿಮ ಎಂದು ಅವರು ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ