AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಚಲನಚಿತ್ರ ವಾಣಿಜ್ಯ ಮಂಡಳಿ ಮೇಲೆ ನನಗೆ ಕೋಪ ಇದೆ’: ಡಿಕೆ ಶಿವಕುಮಾರ್

‘ಚಲನಚಿತ್ರ ವಾಣಿಜ್ಯ ಮಂಡಳಿ ಮೇಲೆ ನನಗೆ ಕೋಪ ಇದೆ’: ಡಿಕೆ ಶಿವಕುಮಾರ್

ಮದನ್​ ಕುಮಾರ್​
|

Updated on: Oct 19, 2025 | 8:58 AM

Share

ಡಿಕೆ ಶಿವಕುಮಾರ್ ಅವರು ಕನ್ನಡ ಚಿತ್ರರಂಗದ ಜತೆ ನಂಟು ಹೊಂದಿದ್ದಾರೆ. ‘ಪದ್ಮಭೂಷಣ’ ಪ್ರಶಸ್ತಿ ಪಡೆದ ಹಿರಿಯ ನಟ ಅನಂತ್ ನಾಗ್ ಅವರಿಗೆ ಅಭಿನಂದನಾ ಸಮಾರಂಭ ನಡೆಯಿತು. ಈ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಅವರು ಭಾಗವಹಿಸಿ, ಚಿತ್ರರಂಗದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡರು.

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕನ್ನಡ ಚಿತ್ರರಂಗದ ಜೊತೆ ನಂಟು ಹೊಂದಿದ್ದಾರೆ. ಪದ್ಮ ಭೂಷಣ ಪ್ರಶಸ್ತಿ ಪಡೆದ ಅನಂತ್ ನಾಗ್ ಅವರಿಗೆ ಅಭಿನಂದನಾ ಸಮಾರಂಭ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಭಾಗವಹಿಸಿದ್ದರು. ಈ ವೇಳೆ ಅವರು ಚಿತ್ರರಂಗದ (Kannada Cinema) ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡರು. ‘ಬೇರೆ ಯಾವುದಾದರೂ ಸಂದರ್ಭದಲ್ಲಿ ನಾನು ಫಿಲ್ಮ್ ಚೇಂಬರ್​​ಗೆ ಬರುತ್ತೇನೆ. ಇವರ ಮೇಲೆಲ್ಲ ನನಗೆ ಕೋಪ ಇದೆ. ಇರಲಿ, ಈಗ ನಾನು ಅದರ ಬಗ್ಗೆ ಮಾತಾಡೋಕೆ ಹೋಗಲ್ಲ’ ಎಂದು ಡಿಕೆ ಶಿವಕುಮಾರ್ (DK Shivakumar) ಹೇಳಿದರು. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.