Puneeth Rajkumar: ನಾಳೆ ರಾಜ್ಯದ 550 ಚಿತ್ರಮಂದಿರಗಳಲ್ಲಿ ಪುನೀತ್‌ಗೆ ಪುಷ್ಪಾಂಜಲಿ, ದೀಪಾಂಜಲಿ, ಗೀತಾಂಜಲಿ ಮೂಲಕ ನಮನ
ನಾಳೆ (ನವೆಂಬರ್ 06) ಪುನೀತ್ ರಾಜಕುಮಾರ್ ಅವರಿಗೆ ಚಿತ್ರಪ್ರದರ್ಶಕರ ಸಂಘದ ವತಿಯಿಂದ ನಮನ ಕಾರ್ಯುಕ್ರಮ ನಡೆಯಲಿದೆ. ಈ ಕುರಿತು ದರ್ಶಕರ ವಲಯದ ಅಧ್ಯಕ್ಷ ಕೆ.ವಿ.ಚಂದ್ರಶೇಖರ್ ಮಾಹಿತಿ ನೀಡಿದ್ದಾರೆ.
ನಟ ಪುನೀತ್ ರಾಜಕುಮಾರ್ ಅವರ ಅಕಾಲಿಕ ನಿಧನದಿಂದ ಚಿತ್ರರಂಗ ಕಂಬನಿ ಮಿಡಿದಿತ್ತು. ಚಿತ್ರರಂಗದ ವತಿಯಿಂದ ಪುನೀತ್‌ಗೆ ನಮನ ಸಲ್ಲಿಸುವ ಹಲವು ಕಾರ್ಯಕ್ರಮಗಳೂ ನಡೆದಿವೆ. ಇದೇ ಮಾದರಿಯಲ್ಲಿ ಅಪ್ಪುಗೆ ಶ್ರದ್ಧಾಂಜಲಿ ಸಲ್ಲಿಸಲು ಚಿತ್ರ ಪ್ರದರ್ಶಕರ ವಲಯ ಸಿದ್ಧತೆ ನಡೆಸಿದೆ. ಈ ಬಗ್ಗೆ ಟಿವಿ9 ಜತೆ ಪ್ರದರ್ಶಕರ ವಲಯದ ಅಧ್ಯಕ್ಷ ಕೆ.ವಿ.ಚಂದ್ರಶೇಖರ್ ಮಾತನಾಡಿದ್ದಾರೆ. ಪುನೀತ್ ಅವರಿಗೆ ರಾಜ್ಯದ 550ಕ್ಕೂ ಅಧಿಕ ಚಿತ್ರಮಂದಿರಗಳು ನಮನ ಸಲ್ಲಿಸಲಿವೆ. ನಾಳೆ (ನವೆಂಬರ್ 7) ಸಂಜೆ 6ಕ್ಕೆ ರಾಜ್ಯದ ಚಿತ್ರಮಂದಿರಗಳಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಗೀತಾಂಜಲಿ, ಪುಷ್ಪಾಂಜಲಿ, ದೀಪಾಂಜಲಿ ಮೂಲಕ ಚಿತ್ರ ಪ್ರದರ್ಶಕರಿಂದ ಪುನೀತ್‌ಗೆ ನಮನ ಸಲ್ಲಿಸಲಾಗುತ್ತದೆ. ನಾಗೇಂದ್ರ ಪ್ರಸಾದ್ ರಚಿಸಿದ ಹಾಡಿನ ಮೂಲಕ ಗೀತಾಂಜಲಿ, ನಟ ಪುನೀತ್ ಭಾವಚಿತ್ರಕ್ಕೆ ಪುಷ್ಪನಮನ ಹಾಗೂ ಚಿತ್ರಮಂದಿರಗಳಲ್ಲಿ ಮೊಂಬತ್ತಿ ಹಚ್ಚಿ ಪುನೀತ್‌ಗೆ ದೀಪಾಂಜಲಿ ನಡೆಸಲಾಗುವುದು. ನಂತರ ಮೌನಾಚರಣೆ ಮೂಲಕ ಪುನೀತ್ ರಾಜ್‌ಕುಮಾರ್‌ಗೆ ನಮನ ಸಲ್ಲಿಸಲಾಗುವುದು. ಈ ಮೂಲಕ ಥಿಯೇಟರ್ ಸಿಬ್ಬಂದಿ, ಅಭಿಮಾನಿಗಳು ನೆಚ್ಚಿನ ನಟನಿಗೆ ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:
Puneeth Rajkumar: ಪುನೀತ್ ರಾಜಕುಮಾರ್, ಸಂಚಾರಿ ವಿಜಯ್ ಪ್ರೇರಣೆ; ರಾಜ್ಯದಲ್ಲಿ ನೇತ್ರದಾನ ಶೇ.20-30ರಷ್ಟು ಹೆಚ್ಚಳ
Published on: Nov 06, 2021 03:58 PM
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ

