AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರಪೀಡಿತ ಪಟ್ಟಿಗೆ 9 ಹೊಸ ತಾಲೂಕುಗಳ ಸೇರ್ಪಡೆ: ತಾಲೂಕುಗಳ ಸಂಖ್ಯೆ 226ಕ್ಕೆ ಏರಿಕೆ, ಪರಮೇಶ್ವರ್‌ ಹೇಳಿದ್ದಿಷ್ಟು

ಬರಪೀಡಿತ ಪಟ್ಟಿಗೆ 9 ಹೊಸ ತಾಲೂಕುಗಳ ಸೇರ್ಪಡೆ: ತಾಲೂಕುಗಳ ಸಂಖ್ಯೆ 226ಕ್ಕೆ ಏರಿಕೆ, ಪರಮೇಶ್ವರ್‌ ಹೇಳಿದ್ದಿಷ್ಟು

ಗಂಗಾಧರ​ ಬ. ಸಾಬೋಜಿ
|

Updated on: Oct 15, 2026 | 5:02 PM

Share

ಮುಖ್ಯಾಂಶಗಳು

  • ಕರ್ನಾಟಕದಲ್ಲಿ ಬರ ಪರಿಸ್ಥಿತಿ ತೀವ್ರ
  • ಬರಪೀಡಿತ ಪಟ್ಟಿಗೆ 9 ಹೊಸ ತಾಲೂಕುಗಳ ಸೇರ್ಪಡೆ
  • ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್‌ ಮಾಹಿತಿ

ಕರ್ನಾಟಕದಲ್ಲಿ ಬರ ಪರಿಸ್ಥಿತಿ ತೀವ್ರಗೊಂಡಿದ್ದು, ಈಗಾಗಲೇ 19 ಬರಪೀಡಿತ ತಾಲೂಕುಗಳಿಗೆ ಹೆಚ್ಚುವರಿಯಾಗಿ 9 ತಾಲೂಕುಗಳನ್ನು ಸೇರಿಸಲಾಗಿದೆ. ಇದರಿಂದ ರಾಜ್ಯದ ಒಟ್ಟು 226 ತಾಲೂಕುಗಳು ಬರಪೀಡಿತ ಪ್ರದೇಶಗಳಾಗಿವೆ. ಅಂದಾಜು 60,000 ಕೋಟಿ ರೂ ಬೆಳೆ ನಷ್ಟವಾಗಿದ್ದು, NDRF ಮಾರ್ಗಸೂಚಿಗಳ ಅಡಿಯಲ್ಲಿ 18,000-20,000 ಕೋಟಿ ರೂ ಕೇಂದ್ರದಿಂದ ಪರಿಹಾರ ನಿರೀಕ್ಷಿಸಲಾಗಿದೆ.

ಬೆಂಗಳೂರು, ಅಕ್ಟೋಬರ್​​ 15: ‘ಕರ್ನಾಟಕ ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಹಿನ್ನೆಲೆ ಬರಪೀಡಿತ ತಾಲೂಕುಗಳ ಪಟ್ಟಿಗೆ ಹೆಚ್ಚುವರಿಯಾಗಿ 9 ತಾಲೂಕುಗಳನ್ನು ಸೇರ್ಪಡೆಗೊಳಿಸಲಾಗಿದೆ’ ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್‌ ತಿಳಿಸಿದ್ದಾರೆ. ಆ ಮೂಲಕ ರಾಜ್ಯದಲ್ಲಿ ಬರಪೀಡಿತ ಪ್ರದೇಶಗಳ ಸಂಖ್ಯೆ 226ಕ್ಕೆ ಏರಿಕೆ ಆಗಿದೆ. ಕರಾವಳಿಯ 5, ಮಲೆನಾಡಿನ 3 ಮತ್ತು ಬೆಳಗಾವಿಯ 1 ತಾಲೂಕುಗಳನ್ನ ಪಟ್ಟಿಗೆ ಸೇರಿಸಲಾಗಿದೆ. ಈ ಕುರಿತಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಇನ್ನೂ ಕೆಲವು ತಾಲೂಕುಗಳಲ್ಲಿನ ಪರಿಸ್ಥಿತಿ ಪರಿಶೀಲಿಸಲು ಗ್ರೌಂಡ್ ಟ್ರೂಥಿಂಗ್ ಪ್ರಕ್ರಿಯೆ ಮುಂದುವರಿದಿದೆ. ಟ್ರಿಗರ್ ಒನ್ ಮಾನದಂಡಗಳ ಅಡಿಯಲ್ಲಿ ಅರ್ಹತೆ ಪಡೆದರೆ, ಇನ್ನೂ ಹೆಚ್ಚಿನ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸುವ ಸಾಧ್ಯತೆ ಇದೆ. ಈ ಪ್ರಕ್ರಿಯೆಯು ಪೂರ್ಣಗೊಂಡ ನಂತರ, ಅಂತಿಮ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು’ ಎಂದು ಡಾ. ಪರಮೇಶ್ವರ್‌ ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More